Advertisement

ಬಿಜೆಪಿ ಧನಂಜಯಕುಮಾರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ

08:10 AM Aug 04, 2017 | Team Udayavani |

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಧನಂಜಯಕುಮಾರ್‌ ಗುರುವಾರ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ ಸಮ್ಮುಖದಲ್ಲಿ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್‌ ಸೇರ್ಪಡೆಗೊಂಡರು.

Advertisement

ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಪರಮೇಶ್ವರ್‌, “ಧನಂಜಯ ಕುಮಾರ್‌ ಬಿಜೆಪಿಯಲ್ಲಿದ್ದರೂ ಕೋಮುವಾದಕ್ಕೆ
ಅಂಟಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಜಕಾರಣ ಮಾಡಿದ್ದಾರೆ. ಶಾಸಕರಾಗಿ, ಸಂಸತ್‌ ಸದಸ್ಯರಾಗಿ, ಕೇಂದ್ರ ಸಚಿವರಾಗಿ ಸಾಕಷ್ಟು ಅನುಭವ ಹೊಂದಿದ್ದಾರೆ.

ಅವರ ಸೇರ್ಪಡೆಯಿಂದ ಕರಾವಳಿ ಭಾಗದಲ್ಲಿ ಕಾಂಗ್ರೆಸ್‌ಗೆ ಶಕ್ತಿ ಬಂದಂತಾಗಿದೆ. ಪಕ್ಷದ ಸಿದಾಟಛಿಂತದ ಚೌಕಟ್ಟಿನಲ್ಲಿ ಅವರನ್ನು ಗೌರವದಿಂದ ನಡೆಸಿಕೊಳ್ಳುತ್ತೇವೆ ಹಾಗೂ ಸೂಕ್ತ ಜವಾಬ್ದಾರಿ ನೀಡುತ್ತೇವೆ’ ಎಂದು ಹೇಳಿದರು.
ಪಕ್ಷದ ಅಧಿಕೃತ ಸದಸ್ಯತ್ವ ಪಡೆದು ಮಾತನಾಡಿದ ಧನಂಜಯ ಕುಮಾರ್‌, “ದೇಶದಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಬೇಸರ ತರಿಸುತ್ತಿವೆ. ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸರ್ವಾಧಿಕಾರಿ
ಧೋರಣೆ ಅನುಸರಿಸುತ್ತಿದ್ದಾರೆ.

ಜಾತ್ಯತೀತ ತಳಹದಿಯ ಮೇಲೆ ದೇಶ ನಿರ್ಮಾಣವಾಗಬೇಕಿದೆ. ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್‌ ಉತ್ತಮ ಹಾದಿಯಲ್ಲಿ ಸಾಗುತ್ತಿದೆ.

ರಾಹುಲ್‌ ಗಾಂಧಿಗೆ ಉತ್ತಮ ಭವಿಷ್ಯವಿದೆ’ ಎಂದು ಹೇಳಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಉಪಾಧ್ಯಕ್ಷ ಪ್ರೊ. ಕೆ.ಇ. ರಾಧಾಕೃಷ್ಣ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next