Advertisement

ಜಾರ್ಜ್‌ ರಾಜೀನಾಮೆ ಕೇಳಲು ಬಿಜೆಪಿಗೆ ನೈತಿಕ ಹಕ್ಕಿಲ್ಲ : ಖಾದರ್‌

07:10 AM Sep 19, 2017 | Team Udayavani |

ಮಂಗಳೂರು: ರಾಜ್ಯ ಸರಕಾರವನ್ನು ದೂಷಿಸಲು ಬಿಜೆಪಿಗೆ ಯಾವುದೇ ವಿಷಯ ಸಿಗದಿದ್ದಾಗ ಸಚಿವ ಕೆ.ಜೆ. ಜಾರ್ಜ್‌ ವಿರುದ್ಧ ಸುಳ್ಳು ಆರೋಪ ಮಾಡಿ ರಾಜೀನಾಮೆ ಕೇಳುತ್ತಿದೆ. ಹೀಗೆ ರಾಜೀನಾಮೆ ಕೇಳಲು ಬಿಜೆಪಿಗೆ ನೈತಿಕ ಹಕ್ಕಿಲ್ಲ ಎಂದು ಸಚಿವ ಯು.ಟಿ. ಖಾದರ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. 

Advertisement

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ ಸಿಬಿಐಗೆ 3 ತಿಂಗಳ ಕಾಲಾವಕಾಶ ನೀಡಿದೆ. ಹಿಂದೆ ಸಿಐಡಿ ತನಿಖೆಯಲ್ಲಿ ಲೋಪ ಇರುವ ಕುರಿತು ಅಥವಾ ಪ್ರಕರಣದಲ್ಲಿ ಸಚಿವರ ಪಾತ್ರವಿದೆ ಎಂದು ಎಲ್ಲೂ ಉಲ್ಲೇಖ ಮಾಡಿಲ್ಲ. ರಾಜ್ಯ ಸರಕಾರದ ಭ್ರಷ್ಟಾಚಾರದ ಕುರಿತು ಬಿಜೆಪಿ ಬಳಿ ದಾಖಲೆಗಳಿದ್ದರೆ ಅದನ್ನು ಬಿಡುಗಡೆ ಮಾಡಲಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ತಾಲೂಕು ಪಂಚಾಯತ್‌ ಅಧ್ಯಕ್ಷ ಮೊಹಮ್ಮದ್‌ ಮೋನು, ಕಾಂಗ್ರೆಸ್‌ ಮುಂದಾಳು ಪದ್ಮನಾಭ ನರಿಂಗಾನ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next