Advertisement
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಬಿಜೆ ಜಾರಿ ನಿರ್ದೇಶನಾಲಯವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಗಳಲ್ಲಿ ಹುರುಳಿಲ್ಲ. ಬಿಜೆಪಿ ಎಂದಿಗೂ ದ್ವೇಷದ ರಾಜಕಾರಣ ಮಾಡುವುದಿಲ್ಲ. ಅದೊಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದನ್ನು ದುರುಪಯೋಗ ಮಾಡಿಕೊಳ್ಳುವುದು ಹೇಗೆ ಸಾಧ್ಯ ಎಂದರು. ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಕೂಡ ಅಧಿಕಾರ ನಡೆಸಿತು, ಆಗಲೂ ಜಾರಿ ನಿರ್ದೇಶನಾಲಯವನ್ನು ದುರುಪಯೋಗ ಮಾಡಿಕೊಳ್ಳಲಾಗಿತ್ತೇ ಎಂದು ವ್ಯಂಗ್ಯವಾಡಿದರು.
ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಭವಿಷ್ಯತ್ತಿನ ಬಗ್ಗೆ ಅತಂತ್ರ ಕಾಡುತ್ತಿದೆ. ಹೀಗಾಗಿಯೆ ಜ್ವರ ಬಂದವರ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಇತ್ತೀಚೆಗೆ ಕಾಣಿಸಿಕೊಂಡಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಮುಖ್ಯಸ್ಥರಾದ ಸಿದ್ಧರಾಮಯ್ಯ, ಜಾರಕಿಹೊಳಿ ಸಹೋದರರು, ಬಳ್ಳಾರಿಯ ನಾಗೇಂದ್ರ ಮತ್ತವರ ತಂಡ ಮಾತನಾಡಲಿ ಎಂದು ಹೇಳಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರ, ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ನಿರತವಾಗಿದೆ. ಹುದ್ದೆಗೆ ಇಂತಿಷ್ಟು ಎಂದು ಫಿಕ್ಸ್ ಮಾಡಿದೆ.ವರ್ಗಾವಣೆ ದಂಧೆಯಲ್ಲಿ ನಿರತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಅಭಿವೃದ್ಧಿಯ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಟೀಕಿಸಿದರು.