Advertisement

Hubli; ಕುಮಾರಸ್ವಾಮಿ ವಿರುದ್ದ ಬಿಜೆಪಿ ʼಗಣಿʼ ಹುನ್ನಾರ: ದಿನೇಶ್‌ ಗುಂಡೂರಾವ್

11:10 AM Aug 23, 2024 | Team Udayavani |

ಹುಬ್ಬಳ್ಳಿ: ರಾಜ್ಯಪಾಲರು ತೆಗೆದುಕೊಳ್ಳುವ ನಿರ್ಧಾರದಿಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumaraswamy) ತಲೆದಂಡ ಆಗಲಿದೆ. ಇದು ಬಿಜೆಪಿಯವರು ಮಾಡಿದ ಹುನ್ನಾರವಾಗಿದೆ. ಬಿಜೆಪಿಯವರಿಗೆ ಜೆಡಿಎಸ್ ಮುಗಿಸಬೇಕು ಎನ್ನುವ ಚಿಂತನೆ ಬಹಳ ದಿನಗಳಿಂದ ಇತ್ತು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ (Dinesh Gundurao) ಹೇಳಿದರು.

Advertisement

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದಿನಿಂದಲೂ ಬಿಜೆಪಿ ನಾಯಕರು ಜೆಡಿಎಸ್ ಮುಗಿಸಬೇಕು ಎನ್ನುವ ಹುನ್ನಾರ ಮಾಡಿದ್ದರು. ಇದೀಗ ಎಚ್.ಡಿ.ಕುಮಾರಸ್ವಾಮಿ ಅವರ ಹಳೇ ಪ್ರಕರಣವನ್ನು ಮುನ್ನೆಲೆಗೆ ತಂದವರೇ ಬಿಜೆಪಿಯವರು. ಗಣಿ ಇಲಾಖೆಯಲ್ಲಿ ಹಿಂದೆ ಹಗರಣವಾಗಿತ್ತು. ಇದೀಗ ಕೇಂದ್ರದಲ್ಲಿ ಗಣಿ ಸಚಿವರಾಗಿದ್ದಾರೆ. ಹೀಗಾಗಿ ರಾಜ್ಯಪಾಲರು ತೆಗೆದುಕೊಳ್ಳುವ ನಿರ್ಧಾರದಿಂದ ಕುಮಾರಸ್ವಾಮಿ ಅವರ ತಲೆದಂಡ ಆಗಲಿದೆ. ಇದೀಗ ಅವರ ಸಹಿ ಫೋರ್ಜರಿ ಎಂದು ಹೇಳಿತ್ತಿದ್ದು, ಇಷ್ಟು ದಿನ ಯಾಕೆ ದೂರು ಕೊಟ್ಟಿಲ್ಲ ಎಂದು ಪ್ರಶ್ನಿಸಿದರು.

content-img

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭ್ರಷ್ಟಾಚಾರದ ಕಿಂಗ್. ಇವರ ತಂದೆ ದೇಶ ಕಂಡ ದೊಡ್ಡ ಭ್ರಷ್ಟಾಚಾರಿ. ತಂದೆ ಮುಖ್ಯಮಂತ್ರಿಯಿದ್ದಾಗ ವಿಜಯೇಂದ್ರ ಅಧಿಕಾರ ಮಾಡುತ್ತಿದ್ದರು ಎಂದು ಅವರ ಸಚಿವರೇ ಹೇಳಿದ್ದಾರೆ. ಅಂದು ವಿಜಯೇಂದ್ರ ತೆರಿಗೆ ಎಂದೇ ನಿಗದಿಯಾಗಿತ್ತು. ಇವರು ನಮ್ಮ ಬಗ್ಗೆ, ನಮ್ಮ ಮುಖ್ಯಮಂತ್ರಿಯ ಬಗ್ಗೆ ಮಾತನಾಡುತ್ತಿರುವುದಕ್ಕೆ ನಾಚಿಕೆಯಾಗಬೇಕು. ಇಡೀ ಶಾಸಕರು ಮುಖ್ಯಮಂತ್ರಿ ಪರವಾಗಿ ನಿಂತಿದ್ದಾರೆ. ಬಿಜೆಪಿ ಒಡೆದ ಮನೆಯಾಗಿದೆ ಎಂದು ತಿರುಗೇಟು ನೀಡಿದರು.

ರಾಜ್ಯಪಾಲರ ಬಗ್ಗೆ ನಮಗೆ ಬಹಳ ಗೌರವವಿತ್ತು. ಆದರೆ ಕೇಂದ್ರ ನಾಯಕರ ಒತ್ತಡಕ್ಕೆ ಮಣಿದು ನಿಯಮ ಬಾಹಿರವಾಗಿ ಖಾಸಗಿ ದೂರು ಆಧರಿಸಿ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಸೂಚಿಸಿದ್ದಾರೆ. ಆದರೆ ಅಧಿಕೃತ ತನಿಖಾ ಸಂಸ್ಥೆಗಳು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ, ಮುರುಗೇಶ ನಿರಾಣಿ, ಜನಾರ್ಧನರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದರೂ ಅನುಮತಿ ನೀಡದಿರುವುದು ರಾಜ್ಯಪಾಲ ಹುದ್ದೆಗೆ ಅಗೌರವ ತೋರಿಲ್ಲವೇ. ಈ ಮುಜುಗರದಿಂದ ರಾಜ್ಯಪಾಲರು ಸಾರ್ವಜನಿಕರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಜುಗರ ಅನುಭವಿಸುವಂತಾಗಿದೆ ಎಂದರು.

Advertisement

ಯಾರೇ ಭ್ರಷ್ಟಾಚಾರ ಮಾಡಿದರೂ ತಪ್ಪು. ಬಿಜೆಪಿ ಮಾಡುತ್ತಿರುವ ಯಾವುದೇ ಆರೋಪಗಳಲ್ಲಿ ಸಾಕ್ಷಿ, ದಾಖಲೆಗಳಿಲ್ಲದ ಕಾರಣ ಇದೀಗ ರಾಜ್ಯಪಾಲರು ದಲಿತರಾಗಿದ್ದು ಅವರನ್ನು ಅವಮಾನ ಮಾಡಿದ್ದಾರೆ ಎಂದು ಹೊರಟಿದ್ದಾರೆ. ರಾಜ್ಯಪಾಲರ ಜಾತಿಯನ್ನು ಪ್ರಸ್ತಾಪಿಸಿರುವುದೇ ಬಿಜೆಪಿ ನಾಯಕರು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.