Advertisement

BJP; ಜೆ.ಪಿ.ನಡ್ಡಾ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ ಡಾ.ಸುಧಾಕರ್

06:54 PM Jan 30, 2024 | Team Udayavani |

ಹೊಸದಿಲ್ಲಿ: ರಾಜ್ಯದಲ್ಲಿ ಬಿಜೆಪಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸುತ್ತಿದ್ದು ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಡಾ. ಕೆ. ಸುಧಾಕರ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ದಾ ಅವರನ್ನು ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿ ಭೇಟಿಯಾಗಿ ಮಹತ್ವದ ಮಾತುಕಥೆ ನಡೆಸಿದ್ದಾರೆ.

Advertisement

ನವದೆಹಲಿಯಲ್ಲಿ ಇಂದು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ದಾ ಅವರನ್ನು ಭೇಟಿಯಾಗಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಾಯಿತು.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಾಲ್ಕು ವರ್ಷ ಪೂರೈಸಿರುವ ಜೆ.ಪಿ.ನಡ್ಡಾ ಅವರು ದೇಶದ ಉದ್ದಗಲಕ್ಕೂ ಬಿಜೆಪಿ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪಕ್ಷವನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿದ್ದಾರೆ.ನಮ್ಮೆಲ್ಲರ ನೆಚ್ಚಿನ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಭಾರತದ ಪ್ರಧಾನಿ ಮಾಡಲು, ಮೂರನೇ ಅವಧಿಯಲ್ಲಿ ಅವರಿಗೆ ಕರ್ನಾಟಕದದಿಂದ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ರಾಜ್ಯದ ಎಲ್ಲಾ 28 ಸ್ಥಾನಗಳಲ್ಲಿ ಜಯ ಸಾಧಿಸಲು ರೂಪಿಸಬೇಕಾದ ಕಾರ್ಯತಂತ್ರ, ಜೆಡಿಎಸ್ ಜತೆಗಿನ ಹೊಂದಾಣಿಕೆ, ಸೇರಿದಂತೆ ಹಲವು ವಿಷಯಗಳ ಬಗ್ಗೆ ನಡ್ಡಾ ಅವರು ತಮ್ಮ ಸಲಹೆ, ಸೂಚನೆ, ಮಾರ್ಗದರ್ಶನ ನೀಡಿದರು” ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಡಾ. ಸುಧಾಕರ್ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next