Advertisement
ಡಿ.31ರಂದು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು, ಕೇಂದ್ರ ಮತ್ತು ರಾಜ್ಯ ಸರಕಾರಗಳು ಎಲ್ಲ ವರ್ಗಗಳ ಜನತೆಯ ಅಭ್ಯುದಯಕ್ಕೆ ಜಾರಿಗೆ ತಂದಿರುವ ವಿವಿಧ ಜನಪರ ಯೋಜನೆಗಳನ್ನು ಮನೆ ಮನೆಗಳಲ್ಲಿ ಪ್ರಚಲಿತಗೊಳಿಸುವ ಜೊತೆಗೆ ಬೂತ್ ಮಟ್ಟದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.
Related Articles
ಬೆಳಗ್ಗೆ ಗಂಟೆ 8.30ಕ್ಕೆ
ಸಚಿವರ ಕಚೇರಿ, ಕಾರ್ಕಳ
ವಿ.ಸುನೀಲ್ ಕುಮಾರ್, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರು ಇವರಿಂದ
Advertisement
ಕಾಪು ಮಂಡಲ (ಜ.2ರಂದು)ಬೆಳಗ್ಗೆ ಗಂಟೆ 10.00ಕ್ಕೆ
ಹಿರಿಯಡ್ಕ ಕೋಟ್ನಕಟ್ಟೆ ಸುರಭಿ ಸಭಾಂಗಣದಲ್ಲಿ
ಎಸ್.ಅಂಗಾರ, ಮೀನುಗಾರಿಕೆ, ಬಂದರು ಮತ್ತು ಒಳನಾಡ ಜಲಸಾರಿಗೆ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಇವರಿಂದ ಉಡುಪಿ ನಗರ ಮತ್ತು ಗ್ರಾಮಾಂತರ ಮಂಡಲ (ಜ.2ರಂದು)
ಮಧ್ಯಾಹ್ನ ಗಂಟೆ 12.00ಕ್ಕೆ
ಕಲ್ಯಾಣಪುರ ಶ್ರೀ ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ
ಎಸ್.ಅಂಗಾರ, ಮೀನುಗಾರಿಕೆ, ಬಂದರು ಮತ್ತು ಒಳನಾಡ ಜಲಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಇವರಿಂದ ಕುಂದಾಪುರ ಮಂಡಲ (ಜ.2ರಂದು)
ಸಂಜೆ ಗಂಟೆ 3.00ಕ್ಕೆ
ಕೋಟೇಶ್ವರ ಮತಗಟ್ಟೆ 37ರ ಅಧ್ಯಕ್ಷರ ಮನೆಯಲ್ಲಿ
ಶೋಭಾ ಕರಂದ್ಲಾಜೆ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಸಚಿವರು ಇವರಿಂದ ಬೈಂದೂರು ಮಂಡಲ (ಜ.2ರಂದು)
ಸಂಜೆ ಗಂಟೆ 4.00ಕ್ಕೆ
ತೆಗ್ಗರ್ಸೆ ಮತಗಟ್ಟೆ 27ರ ಅಧ್ಯಕ್ಷರ ಮನೆಯಲ್ಲಿ ಧ್ವಜಾರೋಹಣ
ಮಂಡಲಾಧ್ಯಕ್ಷರ ಮನೆಯಲ್ಲಿ ಸಭೆ
ಶೋಭಾ ಕರಂದ್ಲಾಜೆ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಸಚಿವರು ಇವರಿಂದ ಎಲ್ಲಾ ಕಾರ್ಯಕ್ರಮಗಳಲ್ಲಿ ಪಕ್ಷದ ರಾಷ್ಟ್ರೀಯ, ರಾಜ್ಯ, ಜಿಲ್ಲೆ ಮತ್ತು ಮಂಡಲಗಳ ಪದಾಧಿಕಾರಿಗಳ ಸಹಿತ ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಮತ್ತು ಬೂತ್ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಎಲ್ಲಾ ಸ್ತರದ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಸಕ್ರಿಯವಾಗಿ ಭಾಗವಹಿಸಿ ‘ಬೂತ್ ವಿಜಯ ಅಭಿಯಾನ’ವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಕುಯಿಲಾಡಿ ಕರೆ ನೀಡಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ‘ಬೂತ್ ವಿಜಯ ಅಭಿಯಾನ’ದ ಜಿಲ್ಲಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ಅಭಿಯಾನದ ವಿವಿಧ ಕಾರ್ಯಕ್ರಮಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಬಿ.ರವಿ ಅಮೀನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ಆನಂದ ಖಾರ್ವಿ, ಗೀತಾಂಜಲಿ ಎಮ್. ಸುವರ್ಣ, ಸವಿತಾ ಶಿವಾನಂದ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿಗಳಾದ ರೇಶ್ಮಾ ಉದಯ ಶೆಟ್ಟಿ, ಸುನೀತಾ ನಾಯ್ಕ್, ನಳಿನಿ ಪ್ರದೀಪ್ ರಾವ್, ಅನಿತಾ ಶ್ರೀಧರ್, ಗುರುಪ್ರಸಾದ್ ಶೆಟ್ಟಿ, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಚಂದ್ರ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯಕುಮಾರ್ ಉದ್ಯಾವರ, ಜಗದೀಶ್ ಆಚಾರ್ಯ ಕಪ್ಪೆಟ್ಟು ಉಪಸ್ಥಿತರಿದ್ದರು.