ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಭೆ ಶನಿವಾರ ಬೆಂಗಳೂರಿನಲ್ಲಿ ನಡೆಯಲಿದೆ.
Advertisement
ವಿಜಯ ಸಂಕಲ್ಪ ಯಾತ್ರೆ ಪ್ರಯುಕ್ತ ರಾಜ್ಯ ಪ್ರವಾಸದಲ್ಲಿರುವ ನಡ್ಡಾ ಶನಿವಾರ ಸಂಜೆ ಬೆಂಗಳೂರಿಗೆ ಆಗಮಿಸಲಿದ್ದು, ಖಾಸಗಿ ಹೊಟೇಲ್‌ನಲ್ಲಿ ಚುನಾವಣಾ ನಿರ್ವಹಣಾ ಸಮಿತಿ ಸದಸ್ಯರ ಜತೆಗೆ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಚುನಾವಣಾ ಸಹ ಉಸ್ತುವಾರಿ ಅಣ್ಣಾ ಮಲೈ ಸೇರಿ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.