Advertisement

BJP: ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆ ಸಾಧ್ಯತೆ- ಮೈಮರೆಯದೆ ಕೆಲಸ ಮಾಡಿ: ವಿಜಯೇಂದ್ರ

12:13 AM Jan 28, 2024 | Team Udayavani |

ಬೆಂಗಳೂರು: ಲೋಕಸಭೆಗೆ ಯಾವುದೇ ಕ್ಷಣದಲ್ಲೂ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ಯಾರೂ ಮೈಮರೆಯದೆ ಕೆಲಸ ಮಾಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದ್ದಾರೆ.

Advertisement

ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರಗಿದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಎದುರಾಳಿಗಳನ್ನು ಹಗುರವಾಗಿ ತೆಗೆದುಕೊಳ್ಳುವುದು ಬೇಡ. ನಮ್ಮ ಸಾಧನೆಗಳನ್ನು ಜನರ ಮುಂದಿಟ್ಟು, ಹಗಲು ರಾತ್ರಿ ಪಕ್ಷದ ಗೆಲುವಿಗಾಗಿ ಶ್ರಮಿಸಬೇಕಾಗಿದೆ ಎಂದು ಹೇಳಿದರು.

ನೂರಾರು ವರ್ಷಗಳ ತಪಸ್ಸಿನ ಫ‌ಲವಾಗಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯಾಗಿದೆ. ಇದರಿಂದ ಕೋಟ್ಯಂತರ ಹಿಂದೂಗಳು ಕುಣಿದು ಕುಪ್ಪಳಿಸುವ ವಾತಾವರಣ ದೇಶದೆÇÉೆಡೆ ಇದೆ. ಪ್ರಧಾನಿ ಮೋದಿ ಒಂಬತ್ತೂವರೆ ವರ್ಷಗಳಲ್ಲಿ ಸ್ಪಷ್ಟ ವಿಚಾರಗಳನ್ನು ಮುಂದಿಟ್ಟುಕೊಂಡು, ಭ್ರಷ್ಟಾಚಾರಕ್ಕೆ ಅವಕಾಶ ಕೊಡದೆ ಉತ್ತಮ ಆಡಳಿತ ನೀಡಿದ್ದಾರೆ. ಈ ದೇಶವನ್ನು ಜಗತ್ತಿನ ಅಗ್ರಗಣ್ಯ ರಾಷ್ಟ್ರಗಳ ಸಾಲಿನಲ್ಲಿ ತೆಗೆದುಕೊಂಡು ಹೋಗುವ ಕೆಲಸ ಮೋದಿ ನೇತೃತ್ವದಲ್ಲಿ ಆಗುತ್ತಿದೆ ಎಂದರು.

ರಾಮಮಂದಿರ ಆಹ್ವಾನದಲ್ಲಿ ಕಾಂಗ್ರೆಸ್‌ ದ್ವಂದ್ವ
ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆ ವೇಳೆ ಕಾಂಗ್ರೆಸ್‌ ನಡವಳಿಕೆಯನ್ನು ನೀವು ನೋಡಿದ್ದೀರಿ. ರಾಜ್ಯದ ಕಾಂಗ್ರೆಸ್ಸಿಗರು ಆಮಂತ್ರಣ ಬಂದಿಲ್ಲ ಎಂದು ಬೊಬ್ಬೆ ಹೊಡೆಯುತ್ತಿದ್ದರೆ, ಕೇಂದ್ರದ ಕಾಂಗ್ರೆಸ್‌ ಮುಖಂಡರು ಆಮಂತ್ರಣ ಧಿಕ್ಕರಿಸಿ ಅಯೋಧ್ಯೆಗೆ ಹೋಗುವುದಿಲ್ಲ ಎಂಬ ತೀರ್ಮಾನ ಮಾಡಿದ್ದರು. ರಾಜ್ಯದ ಕಾಂಗ್ರೆಸ್‌ ಸರಕಾರ ದ್ವಂದ್ವ ನಿಲುವನ್ನು ತೆಗೆದುಕೊಂಡಿದೆ ಎಂದು ಆಕ್ಷೇಪಿಸಿದರು.

ರಾಜ್ಯ ಸರಕಾರ ಅಧಿಕಾರಕ್ಕೆ ಬಂದು 8 ತಿಂಗಳಾಗಿದ್ದು, ಈ ಅವಧಿಯಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ. ಬರದ ವಿಚಾರದಲ್ಲಿ ರೈತರ ಸಂಕಷ್ಟಕ್ಕೆ ಸ್ಪಂದಿಸಿಲ್ಲ. ರೈತರು ಭೀಕರ ಬರಗಾಲಕ್ಕೆ ತುತ್ತಾಗಿ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಕೂಡ ಅದು ಎಚ್ಚತ್ತಿಲ್ಲ ಎಂದು ಟೀಕಿಸಿದರು.

Advertisement

ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್‌, ಪ್ರಹ್ಲಾದ್‌ ಜೋಷಿ, ರಾಜೀವ್‌ ಚಂದ್ರಶೇಖರ್‌, ಭಗವಂತ ಖೂಬಾ, ವಿಪಕ್ಷ ನಾಯಕ ಆರ್‌. ಅಶೋಕ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದ ಗೌಡ, ಜಗದೀಶ್‌ ಶೆಟ್ಟರ್‌, ಮಾಜಿ ಉಪಮುಖ್ಯಮಂತ್ರಿಗಳಾದ ಡಾ| ಸಿ.ಎನ್‌. ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ, ಕೆ.ಎಸ್‌.ಈಶ್ವರಪ್ಪ, ಮಾಜಿ ಸಚಿವ ಸಿ.ಟಿ.ರವಿ, ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ವಿಧಾನಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next