Advertisement

BJP: ಇಂದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ?

01:53 AM Nov 17, 2023 | Team Udayavani |

ಬೆಂಗಳೂರು: ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಶುಕ್ರವಾರ ಪಕ್ಷದ ಶಾಸಕಾಂಗ ಸಭೆ ಕರೆಯಲಾಗಿದ್ದು, ಶಾಸಕಾಂಗ ನಾಯಕನ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸುವ ಸಾಧ್ಯತೆಗಳಿವೆ.

Advertisement

ಶುಕ್ರವಾರ ಸಂಜೆ 6 ಗಂಟೆಗೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಸಭೆ ನಡೆಯಲಿದ್ದು, ಇದಕ್ಕಾಗಿ ಕೇಂದ್ರದಿಂದ ಇಬ್ಬರು ವೀಕ್ಷಕರನ್ನು ಕಳುಹಿಸಿಕೊಡಲಾಗುತ್ತಿದೆ. ಇಬ್ಬರು ವೀಕ್ಷಕರು ಯಾರು ಎಂಬುದನ್ನು ರಾಜ್ಯ ನಾಯಕರಿಗೂ ತಿಳಿಸದೆ ವರಿಷ್ಠರು ಗೌಪ್ಯತೆ ಕಾಪಾಡಿಕೊಂಡಿದ್ದಾರೆ. ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ, ಪಕ್ಷದ ನಿಕಟಪೂರ್ವ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸಹಿತ ಇನ್ನಿತರರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.

ಲಿಂಗಾಯತ ಸಮುದಾಯಕ್ಕೆ ಪಕ್ಷದ ಅಧ್ಯಕ್ಷ ಸ್ಥಾನ ನೀಡಿರುವುದರಿಂದ ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸ್ಥಾನಕ್ಕೆ ಒಕ್ಕಲಿಗ ಅಥವಾ ಹಿಂದುಳಿದ ವರ್ಗದ ಅಭ್ಯರ್ಥಿಗೆ ಮಣೆ ಹಾಕಬಹುದು ಎನ್ನುವ ಲೆಕ್ಕಾಚಾರಗಳಿವೆ. ಇದರ ಆಧಾರದ ಮೇಲೆ ವಿಧಾನಪರಿಷತ್ತಿನಲ್ಲೂ ವಿಪಕ್ಷ ನಾಯಕನ ಆಯ್ಕೆಯಲ್ಲಿ ವ್ಯತ್ಯಾಸ ಆಗಬಹುದು ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next