ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಕರೆ ಮಾಡಿ ಮಾತುಕತೆ ಮಾಡಿರುವ ಬೆನ್ನಲ್ಲೇ ಕಾಂಗ್ರೆಸ್ ತೀವ್ರ ಟೀಕಾ ಪ್ರಹಾರ ನಡೆಸಿದೆ.
”ಕರ್ನಾಟಕದ ಭ್ರಷ್ಟ ಬಿಜೆಪಿ ನಾಯಕರಿಗೆ ಮೋದಿಯ ‘ಆಶೀರ್ವಾದ’!. ಬಿಜೆಪಿ ಮುಖಂಡ ಈಶ್ವರಪ್ಪ ಅವರಿಗೆ ಕರೆ ಮಾಡಿದ ಪ್ರಧಾನಿ ಮೋದಿ, ಅವರ ಜೊತೆ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿಯವರಿಗೆ ಭ್ರಷ್ಟಾಚಾರದಲ್ಲಿ ಹೆಚ್ಚಿನ ಸಮಸ್ಯೆ ಇಲ್ಲ! ಎನ್ನುವ ಸಂದೇಶ ಗಟ್ಟಿಯಾಗಿದೆ ಮತ್ತು ಸ್ಪಷ್ಟವಾಗಿದೆ ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
”ಬಿಜೆಪಿ ಟಿಕೆಟ್ ನಿರಾಕರಿಸಿದರೂ ಬಂಡಾಯವೆದ್ದ ಬಿಜೆಪಿ ನಾಯಕ ಈಶ್ವರಪ್ಪ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿರುವುದು ಸ್ವೀಕಾರಾರ್ಹವಲ್ಲ!. ಈ ವ್ಯಕ್ತಿ 40% ಕಮಿಷನ್ ಬೇಡಿಕೆಯ ಆರೋಪ ಹೊತ್ತಿದ್ದು, ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ನಂತರ ಭ್ರಷ್ಟಾಚಾರ ಆರೋಪದ ಮೇಲೆ ರಾಜೀನಾಮೆ ನೀಡಬೇಕಾಯಿತು.ಹೊಗಳುವುದರ ಮೂಲಕ…” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
”ಸತ್ಯಪಾಲ್ ಮಲಿಕ್ ಗೋವಾದ ರಾಜ್ಯಪಾಲರಾಗಿದ್ದಾಗ ಹೇಳುತ್ತಿದ್ದರು, ಈಗ ನಾವು ಹೇಳುತ್ತೇವೆ, ಪ್ರಧಾನಿ ಮೋದಿ ಭ್ರಷ್ಟಾಚಾರದ ಪ್ರೀತಿಯಲ್ಲಿದ್ದಾರೆ.40% ಕಮಿಷನ್ ತೆಗೆದುಕೊಳ್ಳುತ್ತಿದ್ದ ಕರ್ನಾಟಕದ ಬಿಜೆಪಿ ನಾಯಕನಿಗೆ ಇಂದು ಪ್ರಧಾನಿ ಮೋದಿ ತಮ್ಮ ಕೈಲಾದಷ್ಟು ಕೆಲಸ ಮಾಡುತ್ತಿದ್ದಾರೆ, ಚುನಾವಣೆಯಲ್ಲಿ ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಈ ಕುರಿತು ನಾವು ವಿವರಣೆಯನ್ನು ಕೇಳುತ್ತೇವೆ!” ಎಂದು ಟ್ವೀಟ್ ಮಾಡಿದೆ.
”ರೌಡಿಗಳಿಗೆ ಕೈ ಮುಗಿಯುತ್ತಾರೆ.ಭ್ರಷ್ಟಾಚಾರಿಗಳಿಗೆ ಕರೆ ಮಾಡಿ ಪ್ರೋತ್ಸಾಹಿಸುತ್ತಾರೆ.ಆದರೆ ಭ್ರಷ್ಟಾಚಾರದ ದೂರುಗಳ ಪತ್ರಗಳಿಗೆ ಮಾತ್ರ ಮೌನವಹಿಸುತ್ತಾರೆ. ನೆರೆ ಸಂತ್ರಸ್ತರ ಗೋಳುಗಳನ್ನು ನಿರ್ಲಕ್ಷಿಸುತ್ತಾರೆ. ಇಂತಹ ಅಪರೂಪದ ಪ್ರಧಾನಿ ನರೇಂದ್ರ ಮೋದಿ.ಭ್ರಷ್ಟಾಚಾರಕ್ಕೆ ಮೋದಿಯೇ ಮಹಾಪೋಷಕರು” ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.