Advertisement
ಹಾಡಹಗಲೇ ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಅವರನ್ನು ಹತ್ಯೆಗೈಯ್ಯಲಾಗಿದೆ. ಕಾಂಗ್ರೆಸ್‌ನ ಮತ ಓಲೈಕೆಯಿಂದ ಇಂತಹ ಕೃತ್ಯಗಳು ರಾಜ್ಯದಲ್ಲಿ ಹೆಚ್ಚುತ್ತಿವೆ. ಹಂತಕ ಫಯಾಜ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು, ಪ್ರಕರಣದ ನಿಷ್ಪಕ್ಷ ತನಿಖೆಗೆ ಸಿಬಿಐಗೆ ಒಪ್ಪಿಸಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದರು.
Related Articles
Advertisement
ಸಿಐಡಿ ತನಿಖೆಗೆ: ಸರಕಾರಬೆಂಗಳೂರು: ನೇಹಾ ಹಿರೇಮಠ ಹತ್ಯೆ ಪ್ರಕರಣ ವನ್ನು ರಾಜ್ಯ ಸರಕಾರವು ಸಿಐಡಿ ತನಿಖೆಗೆ ವಹಿಸಿದೆ. ಸಿಐಡಿ ಅಧಿಕಾರಿಗಳ ತಂಡ ಸೋಮವಾರವೇ ಹುಬ್ಬಳ್ಳಿಗೆ ತೆರಳಿ ಪೊಲೀಸರಿಂದ ನೇಹಾ ಹತ್ಯೆ ಪ್ರಕರಣದ ತನಿಖೆ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ| ಪರಮೇಶ್ವರ್ ತುಮ ಕೂರಿನಲ್ಲಿ ತಿಳಿಸಿದ್ದಾರೆ. ನಿಷ್ಪಕ್ಷ ತನಿಖೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. 10-12 ದಿನಗಳ ಒಳಗಾಗಿ ತನಿಖಾ ವರದಿಯನ್ನು ಸಲ್ಲಿಸುವಂತೆ ಸಮಯ ನಿಗದಿಪಡಿಸಿದ್ದೇವೆ ಎಂದರು. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪ್ರಕರಣ ಸಂಬಂಧ ವಿಶೇಷ ಕೋರ್ಟ್ ರಚಿಸುವುದಾಗಿಯೂ ತಿಳಿಸಿದ್ದಾರೆ. ಅಂಜುಮನ್ ನೇತೃತ್ವದಲ್ಲಿ ಪ್ರತಿಭಟನೆ
ಧಾರವಾಡದಲ್ಲಿ ಅಂಜುಮನ್ ಇಸ್ಲಾಂ ಸಂಸ್ಥೆಯ ನೇತೃತ್ವದಲ್ಲಿ ಅಂಗಡಿ-ಮುಂಗಟ್ಟು ಬಂದ್ ಮಾಡಿದ್ದ ಮುಸ್ಲಿಂ ಸಮುದಾಯದವರು ಅಂಗಡಿಗಳ ಬಾಗಿಲಿಗೆ “ಜಸ್ಟಿಸ್ ಫಾರ್ ನೇಹಾ ಹಿರೇಮಠ’ ಎಂಬ ಪೋಸ್ಟರ್ ಅಂಟಿಸಿ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಅನಂತರ ತೋಳಿಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು. ಬಳಿಕ ತಹಶೀಲ್ದಾರ್ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು. ಹುಬ್ಬಳ್ಳಿಯಲ್ಲೂ ಮುಸ್ಲಿಂ ವ್ಯಾಪಾರಸ್ಥರು ಅಂಗಡಿ ಮುಂಗಟ್ಟು ಬಂದ್ ಮಾಡಿ ನೇಹಾ ಹತ್ಯೆಯನ್ನು ಬಲವಾಗಿ ಖಂಡಿಸಿದರು. ಹುಬ್ಬಳ್ಳಿ ಘಟನೆಯನ್ನು ಖಂಡಿಸುತ್ತೇನೆ. ನಮ್ಮ ಅವಧಿಯಲ್ಲಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ. ಬಿಜೆಪಿ ಆಡಳಿತದ ವೇಳೆ 1,300ಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ನಡೆದಿದ್ದವು.
-ಸಿದ್ದರಾಮಯ್ಯ, ಮುಖ್ಯಮಂತ್ರಿ