Advertisement

28ರಿಂದ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕಾರಿಣಿ

12:14 PM Dec 25, 2021 | Team Udayavani |

ಬೆಂಗಳೂರು : ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಡಿ.28 ಹಾಗೂ 29ರಂದು ಹುಬ್ಬಳ್ಳಿಯಲ್ಲಿ ನಡೆಯಲಿದೆ.ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ಸಹ ಉಸ್ತುವಾರಿ ಡಿ.ಅರುಣಾ, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಪ್ರಹ್ಲಾದ್‌ ಜೋಷಿ, ರಾಜೀವ್‌ ಚಂದ್ರಶೇಖರ್‌, ಭಗವಂತ ಖೂಬಾ, ಸಿಎಂ ಬಸವರಾಜ್‌ ಬೊಮ್ಮಾಯಿ, ಸಂಪುಟದ ಸಚಿವರು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ 568 ಅಪೇಕ್ಷಿತರು ಭಾಗಿಯಾಗಲಿದ್ದಾರೆ.

Advertisement

ಇದನ್ನೂ ಓದಿ :: ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ: ಪ್ರಧಾನಿ ಮೋದಿ ಅವರಿಂದ ಪುಷ್ಪಾಂಜಲಿ

ಕಾರ್ಯಕಾರಿಣಿಯ ಸಿದ್ಧತೆಗೆ 37 ವಿಭಾಗ ತೆರೆಯಲಾಗಿದೆ. ರಾಷ್ಟ್ರೀಯ ಅಧ್ಯಕ್ಷರು ಭಾಗವಹಿಸುವುದರಿಂದ ಸಭೆಗೆ ಹೆಚ್ಚಿನ ಮಹತ್ವ ಬಂದಿದೆ. ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ, ಶಿಸ್ತು ಸಮಿತಿ ರಚನೆ ಸೇರಿದಂತೆ ಮಹತ್ವದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next