ನವದೆಹಲಿ: ಭಾರತೀಯ ಜನತಾ ಪಕ್ಷದ ಮೋರ್ಬಿಯ ಮಾಜಿ ಶಾಸಕ ಕಾಂತಿಲಾಲ್ ಅಮೃತಿಯಾ ಅವರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಗೆ ಟಿಕೆಟ್ ನೀಡಲಾಗಿದೆ.
ಇತ್ತೀಚೆಗೆ ಮೋರ್ಬಿ ಸೇತುವೆ ಅವಘಡ ಸಂಭವಿಸಿದಾಗ ತನ್ನ ಜೀವದ ಹಂಗು ತೊರೆದು ಟ್ಯೂಬ್ ಹಾಕಿಕೊಂಡು ನೀರಿಗೆ ಹಾರಿದವರೇ ಕಾಂತಿಲಾಲ್. ಕೆಲವರ ಪ್ರಾಣವನ್ನೂ ಉಳಿಸಿದ್ದಾರೆ. ಈ ಹಿಂದೆ ಅವರ ಹೆಸರು ಪಟ್ಟಿಯಲ್ಲಿ ಇರಲಿಲ್ಲ ಆದರೆ ಅಪಘಾತದ ಸಂದರ್ಭದಲ್ಲಿ ತೋರಿದ ಧೈರ್ಯಕ್ಕೆ ಪ್ರತಿಫಲ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.
ತಡರಾತ್ರಿಯವರೆಗೂ ನಡೆದ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಸುಮಾರು ನೂರು ಮಂದಿಯ ಹೆಸರುಗಳನ್ನು ಅಂಗೀಕರಿಸಲಾಗಿದೆ. ಮೊದಲ ಸುತ್ತಿನ ಎಲ್ಲಾ 89 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ನಿರ್ಧರಿಸಲಾಗಿದೆ. ಮೊರ್ಬಿಯ ಹಾಲಿ ಶಾಸಕ ಬ್ರಿಜೇಶ್ ಮೆರ್ಜಾ ಅವರ ಹೆಸರನ್ನು ಕೈಬಿಡಲಾಗಿದೆ.
182 ಸ್ಥಾನಗಳ ವಿಧಾನಸಭೆಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು. ಮೊದಲ ಹಂತದಲ್ಲಿ ಡಿಸೆಂಬರ್ 1 ರಂದು ಮತ್ತು ಎರಡನೇ ಹಂತದಲ್ಲಿ ಡಿಸೆಂಬರ್ 5 ರಂದು ಮತದಾನ ನಡೆಯಲಿದೆ. ಅದೇ ಸಮಯದಲ್ಲಿ, ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶವು ಡಿಸೆಂಬರ್ 8 ರಂದು ಪ್ರಕಟವಾಗಲಿದೆ.
ಇದನ್ನೂ ಓದಿ : ಅಲ್ಪಸಂಖ್ಯಾತರ ಮತಕ್ಕಾಗಿ ಜೊಲ್ಲು ಸುರಿಸುವ ಕಾಂಗ್ರೆಸ್: ಸಚಿವ ಅರಗ ಜ್ಞಾನೇಂದ್ರ