ಬಿಜೆಪಿಯ ಕೇಂದ್ರೀಯ ಚುನಾವಣ ಸಮಿತಿಯ ಸಭೆ ಗುರುವಾರ ನಡೆಯುವ ಸಾಧ್ಯತೆ ಇದೆ. ಮೊದಲ ಹಂತದಲ್ಲಿ ಕನಿಷ್ಠ 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಹುರಿಯಾಳುಗಳ ಹೆಸರುಗಳನ್ನು ಪ್ರಕಟಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ. 3ನೇ ಬಾರಿಗೆ ಅಧಿಕಾರದಲ್ಲಿ ಮುಂದುವರಿಯುವ ಇರಾದೆ ಯಲ್ಲಿರುವ ಬಿಜೆಪಿ 370 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ, ಎನ್‌ಡಿಎ ಮೈತ್ರಿಕೂಟ ಒಟ್ಟಾಗಿ 400 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿಯನ್ನು ಈಗಾಗಲೇ ಹಾಕಿಕೊಂಡಿದೆ. ಪ್ರಧಾನಿ ಮೋದಿಯವರು ವಾರಾಣಸಿ ಕ್ಷೇತ್ರ ದಿಂದ 3ನೇ ಬಾರಿಗೆ ಕಣಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ.
Advertisement
ರಾಜ್ಯದಲ್ಲೂ ಆಗಲಿದೆಯೇ?ಫೆ. 29ರಂದು ರಾಜ್ಯದ ಕೆಲವು ಲೋಕಸಭಾ ಸ್ಥಾನಗಳಿಗೂ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟವಾಗುವ ಅಂದಾಜಿದೆ. ಯಾವುದೇ ಗೊಂದಲ, ಭಿನ್ನಾಭಿಪ್ರಾಯಗಳು ಇರದ ಸ್ಥಾನ
ಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗ ಬಹುದು. ಹಿಂದಿನ ಚುನಾವಣೆಯಲ್ಲಿ 25 ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ ಜೆಡಿಎಸ್‌ನೊಂದಿಗೆ ಸೇರಿ ಸ್ಪರ್ಧಿಸುತ್ತಿದೆ. ಮೈತ್ರಿಕೂಟದ ಮೂಲಕ 28 ಸ್ಥಾನಗಳನ್ನು ಗೆಲ್ಲುವ ಉಮೇದಿನಲ್ಲಿದೆ. ಈಗಾಗಲೇ ಅಭ್ಯರ್ಥಿಗಳ ಆಯ್ಕೆಗೆ ರಾಜ್ಯ ಬಿಜೆಪಿ ಕಸರತ್ತು ನಡೆಸುತ್ತಿದೆ.