Advertisement

ರಾಜ್ಯಸಭೆಯಲ್ಲಿ ಬಿಜೆಪಿ ಸೆಂಚುರಿ; 1990ರ ಬಳಿಕ 100 ಸದಸ್ಯರನ್ನು ಹೊಂದಿದ ಸಾಧನೆ

09:03 PM Apr 01, 2022 | Team Udayavani |

ನವದೆಹಲಿ: ರಾಜ್ಯಸಭೆಯಲ್ಲಿ ಆಡಳಿತ ಪಕ್ಷ ಬಿಜೆಪಿ 100 ಸದಸ್ಯ ಬಲವನ್ನು ಪಡೆದುಕೊಂಡಿದೆ. 1990ರ ಬಳಿಕ ಇಂಥ ಸಾಧನೆ ಮಾಡಿದ ಮೊದಲ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Advertisement

ಗುರುವಾರ ಅಸ್ಸಾಂ, ತ್ರಿಪುರಾ ಮತ್ತು ನಾಗಾಲ್ಯಾಂಡ್‌ಗಳಿಂದ ಮೇಲ್ಮನೆಗೆ ನಡೆದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಜಯ ಸಾಧಿಸುವ ಮೂಲಕ ಬಿಜೆಪಿಗೆ ರಾಜ್ಯಸಭೆಯಲ್ಲಿ 100 ಸದಸ್ಯರನ್ನು ತಲುಪಲು ಸಾಧ್ಯವಾಗಿದೆ.

ಪಂಜಾಬ್‌ನಿಂದ ರಾಜ್ಯಸಭೆಗೆ ನಡೆದಿದ್ದ ಚುನಾವಣೆಯಲ್ಲಿ ಆಮ್‌ ಆದ್ಮಿ ಪಾರ್ಟಿ ಎಲ್ಲಾ ಐದು ಸ್ಥಾನಗಳನ್ನು ಗೆದ್ದುಕೊಂಡದ್ದು, ಬಿಜೆಪಿಗೆ ಸಣ್ಣ ಪ್ರಮಾಣದ ಹಿನ್ನಡೆಯಾಗಿದೆ.ಆ ನಷ್ಟವನ್ನು ಮೂರು ಈಶಾನ್ಯ ರಾಜ್ಯಗಳಿಂದ ಮತ್ತು ಹಿಮಾಚಲ ಪ್ರದೇಶಗಳಿಂದ ಪಡೆದುಕೊಂಡಿದೆ.

ಇದನ್ನೂ ಓದಿ:ಡಾ. ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಸದ್ಯ ಮೇಲ್ಮನೆಯಲ್ಲಿ ಬಿಜೆಪಿಯ ಸದಸ್ಯ ಬಲ 97 ಆಗಿದೆ. 245 ಸದಸ್ಯರ ಬಲದ ಮೇಲ್ಮನೆಯಲ್ಲಿ ಆಡಳಿತ ಪಕ್ಷಕ್ಕೆ ಇನ್ನೂ ಬಹುಮತ ಇಲ್ಲ. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ ಏರಿಕೆಯಾಗುತ್ತಲೇ ಇದೆ. ಉತ್ತರ ಪ್ರದೇಶದಲ್ಲಿ ಶೀಘ್ರವೇ ತೆರವಾಗಿರುವ 11 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಕನಿಷ್ಠ 8 ಸ್ಥಾನಗಳನ್ನು ಗೆಲ್ಲುವುದು ಖಚಿತ. 2014ರಲ್ಲಿ ಬಿಜೆಪಿಯ ಸಂಖ್ಯಾ ಬಲ 55 ಇತ್ತು.

Advertisement

1990ರಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರದಲ್ಲಿ ಇದ್ದಾಗ ರಾಜ್ಯಸಭೆಯಲ್ಲಿ ಆಡಳಿತ ಪಕ್ಷದ ಬಲ 108 ಆಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next