Advertisement

ಆಡಳಿತದ ಚಾಕಚಕ್ಯತೆಯಿಂದಾಗಿ ಈ ಬಾರಿ BJP ಬಾವುಟ ಹಾರಲಿದೆ: ಈರಣ್ಣ ಕಡಾಡಿ 

08:47 PM Apr 11, 2023 | Team Udayavani |

ಪಿರಿಯಾಪಟ್ಟಣ: ಪ್ರಧಾನಿ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರ ಆಡಳಿತದ ಚಾಕಚಕ್ಯತೆ ಮೆಚ್ಚಿ ಜನರು ತಾಲ್ಲೂಕಿನಲ್ಲಿ ಬಿಜೆಪಿ ಬಾವುಟವನ್ನು ಹಾರಿಸಲಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ವಿಶ್ವಾಸ ವ್ಯಕ್ತಪಡಿಸಿದರು.

Advertisement

ತಾಲ್ಲೂಕಿನ ರಾವಂದೂರಿನ ಶಕ್ತಿ ಮಹಲ್ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಆಯೋಜಿಸಿದ್ದ ಬಿಜೆಪಿ ರೈತ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರಗಳು ರೈತರ ಸಾಲ ಮನ್ನಾ ಮಾಡುವ ಧೈರ್ಯವನ್ನು ಮಾಡಲಿಲ್ಲ.

ಆದರೆ, ಯಡಿಯೂರಪ್ಪ ನವರರು ರೈತರ ಸಾಲ ಮನ್ನಾ ಮಾಡುವ ಧೈರ್ಯ ತೋರಿದರು. ಬಿಜೆಪಿ ರೈತರ ಪಕ್ಷವಾಗಿದೆ ಹಾಗಾಗಿ ರೈತ ಸಮುದಾಯಕ್ಕೆ ಸರ್ಕಾರದಿಂದ ಅನೇಕ ಯೋಜನೆಗಳನ್ನು ರೈತರ ಪರವಾಗಿ ಡಬಲ್ ಎಂಜಿನ್ ಸರ್ಕಾರಗಳು ನೀಡುತ್ತಿವೆ. ಇದರಲ್ಲಿ ಪಿ.ಎಂ. ಕಿಸಾನ್ ಸಮ್ಮಾನ್ ಯೋಜನೆ ಎಲ್ಲಾ ವರ್ಗದ ರೈತರನ್ನು ಕೈ ಹಿಡಿಯುತ್ತಿದೆ. ಅಲ್ಲದೇ ರೈತರ ಮಕ್ಕಳಿಗಾಗಿ ರೈತ ಮಿತ್ರ ಯೋಜನೆಯಡಿಯಲ್ಲಿ ವಿದ್ಯಾರ್ಥಿವೇತನವನ್ನು ನೀಡುತ್ತಿರುವ ಏಕೈಕ ಸರಕಾರ ಬಿಜೆಪಿ ಮಾತ್ರ. ಮುಂದೆಯೂ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಮುಂದಿನ ದಿನಗಳಲ್ಲಿ ರೈತರಿಗೆ ಸಾವಿರಾರು ಸಂಖ್ಯೆಯಲ್ಲಿ ಯೋಜನೆಗಳು ಜಾರಿಯಾಗುವುದು ನಿಶ್ಚಿತ ಎಂದರು.

ಈ ಹಿಂದೆ ಈ ತಾಲ್ಲೂಕಿನಲ್ಲಿ ಬಿಜೆಪಿ ಶಾಸಕರನ್ನು ನೋಡಿದ್ದೇವೆ ಮುಂದೆಯೂ ತಾಲ್ಲೂಕಿನಲ್ಲಿ ಬಿಜೆಪಿ ಬೇರುಗಳನ್ನು ಬಿಟ್ಟುಕೊಂಡು ಬಿಜೆಪಿಯ ಶಾಸಕರು ವಿಧಾನಸಭೆಯ ಮೆಟ್ಟಿಲು ಹತ್ತಲಿದ್ದಾರೆ. ಆದ್ದರಿಂದ ತಾಲ್ಲೂಕಿನ ಮೂಲೆ ಮೂಲೆಗಳಲ್ಲಿ ಪಕ್ಷದ ತತ್ವ, ಸಿದ್ಧಾಂತ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಾಧನೆ ತಿಳಿಸುವ ಕಾರ್ಯಕ್ರಮಗಳನ್ನು ತಿಳಿಸಿ ಮತ ಪಡೆಯಬೇಕು ಎಂದರು.

ಬಿಜೆಪಿ ಅಭ್ಯರ್ಥಿ ಗೆಲ್ಲಿಸಿಕೊಳ್ಳಲು ಶ್ರಮಿಸಿ:
ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್ ಮಾತನಾಡಿ, ಗಡಿಯಲ್ಲಿ ಸೈನಿಕ ತನ್ನ ಸಂಸಾರ, ಮಕ್ಕಳು, ಪರಿವಾರವನ್ನೆಲ್ಲ ಮರೆತು ಹಗಲಿರುಳು ಪಹರೆ ಕಾಯುವ ರೀತಿಯಲ್ಲಿ ಯುವ ಮೋರ್ಚಾ ಕಾರ್ಯಕರ್ತರೆಲ್ಲರೂ ಹಗಲಿರುಳು ವಿರಮಿಸದೇ ಚುನಾವಣೆ ಮುಗಿಯುವವರೆಗೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ದುಡಿಯಬೇಕೆಂದು ಕರೆ ನೀಡಿದರು.

Advertisement

ಮಾಜಿ ಸಂಸದ ಸಿ.ಹೆಚ್.ವಿಜಯಶಂಕರ್ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ದೇಶವು ಅತ್ಯಂತ ವೇಗದಲ್ಲಿ ಅಭಿವೃದ್ಧಿ ಸಾಧಿಸುತ್ತಿದೆ. ಕಾಂಗ್ರೆಸ್ ಪಕ್ಷದ ಜಾತಿವಾದದ ಮೂಲಕ, ಜೆಡಿಎಸ್ ಪಕ್ಷದ ಕುಟುಂಬವಾದದ ಮೂಲಕ ರಾಜ್ಯದ ಜನರನ್ನು ಒಡೆದು ಆಳುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲರ ವಿಶ್ವಾಸ ಪಡೆದು ಭಾರತವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುತ್ತಿದೆ. ಜಗತ್ತಿನ ಅಗ್ರಮಾನ್ಯ ದೇಶವಾಗುವತ್ತ ಭಾರತ ಮುನ್ನಡೆಯುತ್ತಿದೆ. ನರೇಂದ್ರ ಮೋದಿಯವರು ಪ್ರಧಾನಿಯಾಗುವ ಮೊದಲು ಜಗತ್ತಿನಲ್ಲಿ 10ನೇ ಸ್ಥಾನದಲ್ಲಿದ್ದ ಭಾರತ, ಈಗ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ.

ಆಟೋಮೊಬೈಲ್, ಮೊಬೈಲ್, ಕೈಗಾರಿಕಾ ಮತ್ತಿತರ ಕ್ಷೇತ್ರಗಳಲ್ಲಿ ದೇಶ ಪ್ರಗತಿ ಸಾಧಿಸಿದೆ. ನಮ್ಮನ್ನು ಆಳಿದ ಬ್ರಿಟಿಷ್ ಸರ್ಕಾರವನ್ನು ಹಿಂದಿಕ್ಕಿ ಭಾರತ ಮುನ್ನಡೆಯುತ್ತಿದೆ. ಕರ್ನಾಟಕದಲ್ಲೂ ಮುಂಬರುವ ಚುನಾವಣೆಯಲ್ಲಿ ಬಿಜೆಪಿ 150 ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಬಿಜೆಪಿ ಅರ್ಕಾರ ಅಧಿಕಾರಕ್ಕೆ ಬರಲಿದೆ ಆದ್ದರಿಂದ ಪಿರಿಯಾಪಟ್ಟಣದಲ್ಲೂ ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಸುನೀಲ್ ಸುಬ್ರಹ್ಮಣ್ಯ, ಮಾಜಿ ಶಾಸಕ ಹೆಚ್.ಸಿ.ಬಸವರಾಜು, ರಾಜ್ಯ ರೈತ ಪಧಾನಕಾರ್ಯದರ್ಶಿ ಡಾ. ನವೀನ್ ಕುಮಾರ್, ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಂ.ರಾಜೇಗೌಡ, ಮಾಜಿ ಅಧ್ಯಕ್ಷ ಪಿ.ಜೆ.ರವಿ, ಪ್ರಧಾನ ಕಾರ್ಯದರ್ಶಿಗಳಾದ ಹೆಚ್.ಸಿ.ವೀರಭಧ್ರ, ಬೆಮ್ಮತ್ತಿ ಚಂದ್ರು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಮೇಶ್ ಕುಮಾರ್, ಒಬಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ತಾಲ್ಲೂಕು ರೈತ ಮೋರ್ಚಾ ಅಧ್ಯಕ್ಷ ಬೆಕ್ಕರೆ ಮಹದೇವ್ ಮುಖಂಡರಾದ ಆರ್.ಟಿ.ಸತೀಶ್ ಶಿವಪ್ರಸಾದ್, ಶಿವಕುಮಾರ್, ಕಿರಣ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next