Advertisement

ಸಿಎಂ ರಾಜೀನಾಮೆಗೆ ಬಿಜೆಪಿ ಪಟ್ಟು

05:21 PM Sep 22, 2018 | Team Udayavani |

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ರಾಜ್ಯದ ಜನರನ್ನು ದಂಗೆ ಏಳುವಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ರಾಜ್ಯದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯರ್ತಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

Advertisement

ನಗರದ ಟಿಪ್ಪು ಸುಲ್ತಾನ್‌ ಉದ್ಯಾನವನದ ಬಳಿ ಜಮಾಯಿಸಿದ ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್‌ ಹಾಗೂ ಸಿಎಂ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಜಿಲ್ಲಾ ಧಿಕಾರಿ ಮೂಲಕ
ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. 

ಜವಾಬ್ದಾರಿ ಸ್ಥಾನದಲ್ಲಿರುವ ಎಚ್‌.ಡಿ. ಕುಮಾರಸ್ವಾಮಿ ಅವರು ಮಾಧ್ಯಮಗಳ ಎದುರು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧ ರಾಜ್ಯದ ಜನ ಹಾಗೂ ಜೆಡಿಎಸ್‌, ಕಾಂಗ್ರೆಸ್‌ ಕಾರ್ಯಕರ್ತರು ದಂಗೆ
ಏಳಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವುದು ಸರಿಯಲ್ಲ.

ಇದರಿಂದ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ ಎಂಬ ಪ್ರಜ್ಞೆ ಕೂಡ ಇಲ್ಲದೇ ಈ ರೀತಿ ಮಾತನಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.  ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಗೂಂಡಾ ಕಾರ್ಯಕರ್ತರು ಯಡಿಯೂರಪ್ಪ ಅವರ ಮನೆ
ಎದುರು ದಾಂಧಲೆ ಮಾಡಿರುವುದು ಖಂಡನೀಯ. ರಾಜ್ಯ ಮಾಜಿ ಮುಖ್ಯಮಂತ್ರಿಯಾದ ಅವರ ಮನೆಗೆ ಸೂಕ್ತ ಬಂದೋಬಸ್ತ್ ನೀಡುವಲ್ಲಿ ರಾಜ್ಯದ ಸಮ್ಮಿಶ್ರ ಸರ್ಕಾರದ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆ ಎದುರು ನಡೆದ ಘಟನೆ ಖಂಡನಾರ್ಹ. ರಾಜ್ಯದಲ್ಲಿ ಕಾನೂನು
ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ರಾಜ್ಯದ ಒಬ್ಬ ಮಾಜಿ ಮುಖ್ಯಮಂತ್ರಿ ಪರಿಸ್ಥಿತಿ ಹೀಗಾದರೆ, ಸಾಮಾನ್ಯ ಜನರ ಸ್ಥಿತಿ ಏನು. ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದ ಜನರ ಕ್ಷಮೆ ಯಾಚಿಸಬೇಕು. ತಮ್ಮ ಹೇಳಿಕೆ ಹಿಂಪಡೆಯಬೇಕು. ರಾಜ್ಯಪಾಲರು ಕೂಡಲೇ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.

Advertisement

ಬಿಜೆಪಿ ಜಿಲ್ಲಾಧ್ಯಕ್ಷ ಶರಣಪ್ಪಗೌಡ ಜಾಡಲದಿನ್ನಿ, ಮಾಜಿ ಶಾಸಕ ಎ.ಪಾಪಾರೆಡ್ಡಿ, ಗಂಗಾಧರ ನಾಯಕ, ಮುಖಂಡರಾದ ಎನ್‌. ಶಂಕರಪ್ಪ ವಕೀಲ, ಆರ್‌.ತಿಮ್ಮಯ್ಯ, ದೊಡ್ಡ ಮಲ್ಲೇಶ, ಅಶೋಕ ಗಸ್ತಿ, ರಾಜಕುಮಾರ, ಆಂಜನೇಯ ಯಕ್ಲಾಸ್‌ಪುರ, ಎ.ಚಂದ್ರಶೇಖರ, ಈ.ಶಶಿರಾಜ್‌, ಮುಕ್ತಿಯಾರ್‌, ಕಡಗೋಲ ಆಂಜನೇಯ, ಇನಾನಿ ಸೇಠ್…, ಎ.ವಿಜಯರಾಜ ಅನೇಕ ಕಾರ್ಯಕರ್ತರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next