ಹೊಸದಿಲ್ಲಿ: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಶನಿವಾರ ಭಾರತೀಯ ಜನತಾ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದು, ರಾಜಕೀಯ ದಾಳಿಗಳನ್ನು ನಡೆಸಲು ತನಿಖಾ ಸಂಸ್ಥೆಗಳನ್ನು ಬಳಸುವಲ್ಲಿ ಅದು ಕಾಂಗ್ರೆಸ್ ನ ಹೆಜ್ಜೆಗಳನ್ನು ಅನುಸರಿಸುತ್ತಿದೆ ಎಂದು ಹೇಳಿದರು.
ಕೇಂದ್ರೀಯ ತನಿಖಾ ದಳವು (ಸಿಬಿಐ) ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪತ್ನಿ ರಾಬ್ರಿ ದೇವಿ ಮತ್ತು ಅವರ ಪುತ್ರ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ಸಮನ್ಸ್ ಜಾರಿ ಮಾಡಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಅಖಿಲೇಶ್ ಉತ್ತರಿಸಿದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಜಾರಿ ನಿರ್ದೇಶನಾಲಯ (ಇಡಿ), ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯನ್ನು ಬಳಸಿಕೊಂಡು ದೇಶದ ಹಲವು ರಾಜಕೀಯ ನಾಯಕರ ಮೇಲೆ ದಾಳಿ ನಡೆಸಿತ್ತು. ಬಿಜೆಪಿಯು ಅದೇ ಮಾರ್ಗವನ್ನು ಅನುಸರಿಸುವ ಮೂಲಕ ಹೊಸದನ್ನು ಏನನ್ನೂ ಮಾಡುತ್ತಿಲ್ಲ, ಇಂದು ಕಾಂಗ್ರೆಸ್ ನೆಲಸಮಗೊಂಡಿದೆ, ಬಿಜೆಪಿಯ ಭವಿಷ್ಯವೂ ಅದೇ ಆಗಲಿದೆ” ಎಂದು ಯಾದವ್ ಹೇಳಿದರು.