Advertisement

ಸಾಮಾನ್ಯ ಕಾರ್ಯಕರ್ತರಿಗೆ ಬಿಜೆಪಿಯಿಂದ ರಾಜ್ಯಸಭೆ ಟಿಕೆಟ್: ಶೆಟ್ಟರ್

03:24 PM Jun 08, 2020 | keerthan |

ಧಾರವಾಡ: ರಾಜ್ಯಸಭೆ ಚುನಾವಣೆಗೆ ಬಿಜೆಪಿ ಪಕ್ಷದ ಹೈಕಮಾಂಡ್ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದು, ಸ್ವಾಗತಾರ್ಹ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.

Advertisement

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಕತ್ತಿ, ಪ್ರಭಾಕರ ಕೋರೆ ಸೇರಿದಂತೆ ಕೆಲವರ ಹೆಸರನ್ನು ಅಂತಿಮಗೊಳಿಸಿ ಕಳುಹಿಸಲಾಗಿತ್ತು. ಆದರೆ, ಪಕ್ಷದ ವರಿಷ್ಠರು ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡುವ ಮೂಲಕ ತಮ್ಮ ತೀರ್ಮಾನ ಕೈಗೊಂಡಿದ್ದಾರೆ. ಅದಕ್ಕೆ ನಾವೆಲ್ಲ ಬದ್ಧರಾಗಿರಬೇಕು. ಇದರಿಂದ ಪಕ್ಷದಲ್ಲಿ ಯಾವುದೇ ಭಿನ್ನಮತ ಸ್ಪೋಟಗೊಳ್ಳುವುದಿಲ್ಲ ಎಂಬ ವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ಉಮೇಶ ಕತ್ತಿ, ರಮೇಶ ಕತ್ತಿ ಹಾಗೂ ಪ್ರಭಾಕರ ಕೋರೆ ಅವರಿಗೂ ಸೂಕ್ತ ಸ್ಥಾನಮಾನ ನೀಡುವ ಸಂಬಂಧ ವರಿಷ್ಠರು ತಿರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ವಿಧಾನ ಪರಿಷತ್ ಚುನಾವಣೆ ಸಂಬಂಧ ಇನ್ನೂ ನೋಟಿಫಿಕೇಶನ್ ಹೊರಡಿಸಿಲ್ಲ. ಬೇರೆ ಬೇರೆ ಜಿಲ್ಲೆಗಳಲ್ಲೂ ಆಕಾಂಕ್ಷಿಗಳಿದ್ದಾರೆ. ನಮ್ಮ ಜಿಲ್ಲೆಯಲ್ಲೂ ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ನನ್ನ ಬಳಿಯೂ 30-40 ಅರ್ಜಿಗಳು ಬಂದಿವೆ. ನೋಟಿಫಿಕೇಶನ್ ಹೊರಡಿಸಿದ ಮೇಲೆ ಈ ಬಗ್ಗೆ ವಿಚಾರ ಮಾಡಲಾಗುವುದು ಎಂದರು.

ಹುಬ್ಬಳ್ಳಿ, ಧಾರವಾಡ ಮಧ್ಯೆ ನಡೆದಿರುವ ಬಿಆರ್ ಟಿಎಸ್ ಯೋಜನೆ ನಾನು ಸಿಎಂ ಇದ್ದಾಗ ಜಾರಿಗೆ ತಂದ ಯೋಜನೆ. ಆದರೆ, ಬೇರೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅದು ಅನುಷ್ಠಾನಕ್ಕೆ ಬಂತು. ಇದು ಉತ್ತಮ ಯೋಜನೆ. ಈ ಯೋಜನೆ ವಿಫಲವಾಗಿಲ್ಲ. ಈ ಯೋಜನೆಗೆ ರಾಷ್ಟ್ರೀಯ ಪ್ರಶಸ್ತಿ ಬಂದಿದೆ. ಈ ಯೋಜನೆಯಲ್ಲಿ ಎಲ್ಲಿ ಲೋಪ ಆಗಿದೆ ಎಂಬುದರ ಬಗ್ಗೆ ವಿಚಾರ ಮಾಡಿ ಬಗೆಹರಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next