ಹೊಸದಿಲ್ಲಿ: ಉತ್ತರ ಪ್ರದೇಶದ ಕೈಸರ್‌ಗಂಜ್ ಸಂಸದ ಹಾಗೂ ಮಹಿಳಾ ಕುಸ್ತಿಪಟುಗಳ ಮೇಲಿ ನ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಎದುರಿಸುತ್ತಿರುವ ಬೃಜ್ ಭೂಷಣ್ ಸರಣ್ ಸಿಂಗ್ ಬದಲಿಗೆ, ಅವರ ಪುತ್ರ ಕರಣ್ ಭೂಷಣ್ ಸಿಂಗ್‌ಗೆ ಟಿಕೆಟ್ ನೀಡಿದೆ.
ಇದನ್ನೂ ಓದಿ:Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್
ಬೃಜ್‌ಗೆ ಟಿಕೆಟ್ ನಿರಾಕರಿಸಿದ್ದರೂ ಕೈಸರ್‌ಗಂಜ್ ಕ್ಷೇತ್ರದಲ್ಲಿನ ಸ್ಪರ್ಧೆಯು ಅವರ ಕುಟುಂಬದಲ್ಲೇ ಉಳಿದಿದೆ. ಗೊಂಡಾ ಮತ್ತು ಅದರ ನೆರೆ ಹೊರೆ ಪ್ರದೇಶಗಳಲ್ಲಿ ಭಾರೀ ಪ್ರಭಾವವನ್ನು ಬೃಜ್ ಭೂಷಣ್ ಸಿಂಗ್ ಹೊಂದಿದ್ದಾರೆ.
ರಾಯ್ ಬರೇಲಿಯಲ್ಲಿ ಬಿಜೆಪಿಯಿಂದ ದಿನೇಶ್ ಪ್ರತಾಪ್ ಕಣಕ್ಕೆ:
ಕಾಂಗ್ರೆಸ್‌ನ ಗಾಂಧಿ ಕುಟುಂಬದ ಭದ್ರಕೋಟೆ ರಾಯ್ ಬರೇಲಿಯಲ್ಲಿ ಬಿಜೆಪಿ ಉತ್ತರಪ್ರದೇಶದ ಸಚಿವ ದಿನೇಶ್ ಪ್ರತಾಪ್ ಸಿಂಗ್‌ರನ್ನು ಕಣಕ್ಕಿಳಿಸಿದೆ.
2004ರಲ್ಲಿ ಎಸ್ಪಿಯಿಂದ ವಿಧಾನಪರಿಷತ್ ಚುನಾ ವಣೆಯಲ್ಲಿ ಮೊದಲ ಬಾರಿ ಕಣಕ್ಕಿಳಿದಿದ್ದ ಅವರು, ಬಿಜೆಪಿ ಅಭ್ಯರ್ಥಿ ವಿರುದ್ಧ ಸೋಲುಂಡಿದ್ದರು.