Advertisement

ಸರ್ಕಾರದ ನೈಟ್ ಕರ್ಫ್ಯೂ ಆದೇಶಕ್ಕೆ ಸಿ.ಟಿ.ರವಿ ಅಸಮಾಧಾನ

12:44 PM Dec 27, 2021 | Team Udayavani |

ಚಿಕ್ಕಮಗಳೂರು: ರಾಜ್ಯ ಸರ್ಕಾರ ಹೊರಡಿಸಿರುವ ಹತ್ತು ದಿನಗಳ ನೈಟ್ ಕರ್ಫ್ಯೂ ಆದೇಶಕ್ಕೆ ಬಿಜೆಪಿ ಶಾಸಕ ಸಿ.ಟಿ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದೇ ಸರ್ಕಾರದ ಆದೇಶವನ್ನು ಸರಿ-ತಪ್ಪು ಎಂದು ವ್ಯಾಖ್ಯಾನ ಮಾಡಲಾಗದು. ಆದರೆ ಒಮಿಕ್ರಾನ್ ಗೆ ಭಯಪಡಬೇಕಿಲ್ಲವೆಂದು ವಿಜ್ಞಾನಿಗಳೇ ಹೇಳಿದ್ದಾರೆ. ಮೂಗು ಇರುವವರಿಗೆ ನೆಗಡಿ ತಪ್ಪಲ್ಲ, ನೆಗಡಿ ಬಂದರೆ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ಸರ್ಕಾರ ಕೂಡ ಜನರನ್ನ ಅನಗತ್ಯ ಭಯಕ್ಕೆ ಒಳಪಡಿಸಬಾರದು ಎಂದಿದ್ದಾರೆ.

ಇದನ್ನೂ ಓದಿ:ಹೊಸ ವರ್ಷ ಸಂಭ್ರಮಾಚರಣೆಗೆ ಎಲ್ಲಾದರೂ ಹೋಗಲಿ, ಆದರೆ..: ಸಿಎಂ ಎಚ್ಚರಿಕೆ

ಸದ್ಯ ಜನಜೀವನ ಸಹಜ ಸ್ಥಿತಿಯಲ್ಲಿದೆ, ಆದರೆ ಎಚ್ಚರ ವಹಿಸಬೇಕು. ಅನಗತ್ಯ ಭಯ ಹುಟ್ಟಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಸರ್ಕಾರದ ನಿರ್ಣಯದ ವಿರುದ್ಧ ಚಾಟಿ ಬೀಸಿದರು.

Advertisement

Udayavani is now on Telegram. Click here to join our channel and stay updated with the latest news.

Next