Advertisement

ಶಿಕಾರಿಪುರದಲ್ಲಿ ಜೆಡಿಎಸ್ ಗೆ ಶಾಕ್ ನೀಡಿದ ಬಿಜೆಪಿ; ಕಮಲ ಪಾಳಯಕ್ಕೆ ಬಳಿಗಾರ್

02:16 PM Nov 18, 2022 | Vishnudas Patil |

ಶಿಕಾರಿಪುರ : ಬಿ.ಎಸ್.ಯಡಿಯೂರಪ್ಪ ಅವರ ಭದ್ರಕೋಟೆ ಎಂದು ಪರಿಗಣಿಸಲಾಗಿರುವ ಶಿಕಾರಿಪುರದಲ್ಲಿ ಚುನಾವಣೆಗೆ ನಾಲ್ಕೈದು ತಿಂಗಳಿರುವಾಗಲೇ ರಾಜಕೀಯ ಚಟುವಟಿಕೆ ಗರಿಗೆದರಿದ್ದು ಬಿಜೆಪಿ ಜೆಡಿಎಸ್ ಗೆ ಶಾಕ್ ನೀಡಿದ್ದು,ಕಳೆದ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಫರ್ಧಿಸಿದ್ದ ಅಭ್ಯರ್ಥಿಯನ್ನೇ ತನ್ನ ತೆಕ್ಕೆಗೆ ಸೆಳೆದುಕೊಂಡಿದೆ.

Advertisement

ಇದನ್ನೂ ಓದಿ : ಕಾಂಗ್ರೆಸ್ ಸೋಲಿನ ಭಯದಿಂದ ಆರೋಪ ಮಾಡುತ್ತಿದೆ: ಯಡಿಯೂರಪ್ಪ ಕಿಡಿ

ಕಳೆದ 2 ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಫರ್ಧಿಸಿದ್ದ ಅಭ್ಯರ್ಥಿ ಹೆಚ್.ಟಿ. ಬಳಿಗಾರ್ ರವರನ್ನು ಬಿಜೆಪಿ ಸೆಳೆದುಕೊಂಡಿದ್ದು, ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಮಾಜಿ ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಳಿಗಾರ್ ಬಿಜೆಪಿ ಸೇರಿದ್ದಾರೆ. ಹಲವು ಮುಖಂಡರು ಹಾಗೂ ನೂರಾರು ಕಾರ್ಯಕರ್ತರೊಂದಿಗೆ ಬಳಿಗಾರ್ ಬಿಜೆಪಿ ಸೇರಿದ್ದಾರೆ.

ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಉಪಸ್ಥಿತರಿದ್ದರು.

ಮುಂಬರುವ ಚುನಾವಣೆಯಲ್ಲಿ ಯಡಿಯೂರಪ್ಪ ಅವರ ಬದಲಿಗೆ ಶಿಕಾರಿಪುರದಿಂದ ಬಿ.ವೈ.ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಭಾರಿ ಮತಗಳ ಅಂತರದಿಂದ ಗೆಲ್ಲಲು ಕಸರತ್ತು ಆರಂಭಿಸಿದ್ದಾರೆ ಎನ್ನಲಾಗಿದೆ.

Advertisement

ಈ ಬಾರಿಯೂ ಶಿಕಾರಿಪುರದಲ್ಲಿ‌ ಹೆಚ್ .ಟಿ.ಬಳಿಗಾರ್ ಅವರೇ ಜೆಡಿಎಸ್ ಅಭ್ಯರ್ಥಿ ಎನ್ನಲಾಗಿತ್ತು.ಆದರೆ ಬಿಜೆಪಿ ಸೂಕ್ತ ಸ್ಥಾನಮಾನ ಕೊಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪಕ್ಷ ತೊರೆದಿದ್ದಾರೆ ಎನ್ನಲಾಗಿದೆ.

2018 ರಲ್ಲಿ ಹೆಚ್.ಟಿ. ಬಳಿಗಾರ್ ಅವರು 13,191 ಮತಗಳನ್ನು ಪಡೆದಿದ್ದರು. 2013 ರಲ್ಲಿ 15,007 ಮತಗಳನ್ನು ಪಡೆದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next