Advertisement

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

02:22 PM Mar 27, 2024 | Team Udayavani |

ರಾಯಚೂರು: ಬಿಜೆಪಿಯಲ್ಲಿ ಲೋಕಸಭಾ ಟಿಕೆಟ್ ವಿಚಾರದಲ್ಲಿ ಬಂಡಾಯ ಇನ್ನಷ್ಟು ಬಹಿರಂಗವಾಗುತ್ತಿದ್ದು ಎಸ್ ಟಿ ಮೀಸಲು ಕ್ಷೇತ್ರ ರಾಯಚೂರಿನಲ್ಲಿ ಸಂಸದರ ವಿರುದ್ಧ” ಗೋ ಬ್ಯಾಕ್ ಅಮರೇಶ್ವರ ನಾಯಕ” ಕೂಗು ಕೇಳಿ ಬಂದಿದೆ.

Advertisement

ಬಿಜೆಪಿ ಟೆಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ನಗರದ ಖಾಸಗಿ ಹೋಟೆಲ್ ನಲ್ಲಿ ಬಿ.ವಿ.ನಾಯಕ ಬೆಂಬಲಿಗರ ಚಿಂತನಾ ಸಭೆಯನ್ನು ಬುಧವಾರ ನಡೆಸಲಾಗಿದೆ.

ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕರಿ ಅವರಿಗೆ ಬಿಜೆಪಿ ಮತ್ತೆ ಟಿಕೆಟ್ ನೀಡಿರುವುದಕ್ಕೆ ಬಿ.ವಿ.ನಾಯಕ್ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಬೆಂಬಲಿಗರು ಆಕ್ರೋಶ ಹೊರ ಹಾಕಿದ್ದಾರೆ.

ಬಿಜೆಪಿ ನಾಯಕರು ಟಿಕೆಟ್ ನೀಡುವುದಾಗಿ ಹೇಳಿ ಕೈ ಕೊಟ್ಟಿದ್ದಾರೆ ಎಂದು ವರಿಷ್ಠರ ವಿರುದ್ಧ ಅಭಿಮಾನಿಗಳು, ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದು ಪಕ್ಷೇತರವಾಗಿ ಸ್ಪರ್ಧಿಸಲು ಬಿ.ವಿ.ನಾಯಕ್ ಅವರನ್ನು ಒತ್ತಾಯಿಸಿದ್ದಾರೆ. ಪಕ್ಷದ ನಾಯಕರು ಟಿಕೆಟ್ ವಿಚಾರದಲ್ಲಿ ಮರು ಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next