ಬೆಂಗಳೂರು : ಬಿಜೆಪಿಯವರು ಭಾರತವನ್ನು ಪಾಕಿಸ್ಥಾನದಂತೆ ಮೂಲಭೂತವಾದಿ ಗಳ ದೇಶ ಮಾಡಲು ಹೊರಟಿ ದ್ದಾರೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
ಆರೋಪಿಸಿದ್ದಾರೆ.
ಪಕ್ಷದ ಕಾನೂನು ಘಟಕ ಶನಿವಾರ ಏರ್ಪಡಿಸಿದ್ದ ಲೋಕಸಭಾ ಚುನಾವಣಾ ಚಿಂತನಾ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಕೋಮುವಾದಿ ಸರ್ಕಾರ ಅಧಿಕಾರದಲ್ಲಿದೆ. ಭಾರತವನ್ನು ಪಾಕಿಸ್ತಾನದಂತೆ ಮೂಲಭೂತವಾದಿಗಳ ದೇಶ ಮಾಡಲು ಮುಂದಾಗಿದ್ದು, ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಹೊರಟಿದ್ದಾರೆಂದು ಆರೋಪಿಸಿದರು.
ಜೈ ಶ್ರೀರಾಮ ಎಂದು ದೇವರ ಹೆಸರಲ್ಲಿ ಜನರನ್ನು ಕೊಲ್ಲುತ್ತಾರೆ. ಗೌರಿ ಲಂಕೇಶ್, ಎಂ.ಎಂ.ಕಲಬುರ್ಗಿ, ಗೋವಿಂದ್ ಪನ್ಸಾರೆ ಅವರನ್ನು ಕೊಲೆ ಮಾಡಿದವರು ಯಾರು? ಇಂತಹುದೇ ಆಹಾರ ತಿನ್ನಬೇಕು. ಇದನ್ನೇ ಆಚರಿಸಬೇಕು ಎನ್ನುವ ಮನಸ್ಥಿತಿ ನಿರ್ಮಾಣವಾಗುತ್ತಿದೆ. ದೇಶದ ಜನರು ಅರ್ಥ ಮಾಡಿಕೊಳ್ಳಬೇಕುಎಂದರು.
ಕೇಂದ್ರ ಸರ್ಕಾರದ ಬಗ್ಗೆ ಯಾರಾದರೂ ಧ್ವನಿ ಎತ್ತಿದರೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಅಲ್ಲದೇ ದೇಶ ದ್ರೋಹಿ ಪಟ್ಟ ಕಟ್ಟಲಾಗುತ್ತಿದೆ. ದೇಶದಲ್ಲಿ ಬಲಪಂಥೀಯ ಚಿಂತನೆ ಬಲವಾಗುತ್ತಿದ್ದು,ಎಲ್ಲರನ್ನೂ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯ ದರ್ಶಿ ಮಧು ಯಾಸ್ಕಿ ಗೌಡ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಧನಂಜಯ, ಶಾಸಕಿ ಸೌಮ್ಯಾ ರೆಡ್ಡಿ ಇದ್ದರು.