Advertisement
ಬಿಜೆಪಿ ಹಿಂದುಳಿದ ವರ್ಗಗಳ ವಿರಾಟ್ ಸಮಾವೇಶ ಉದ್ದೇಶಿಸಿ ಮಾತನಾಡಿ, ದಾವಣಗೆರೆ ಯಲ್ಲಿ ಶಕ್ತಿ ಪ್ರದರ್ಶನ ಜತೆಗೇ ಮೈಸೂರಿನಿಂದ ರಥಯಾತ್ರೆ ಶುರು ಮಾಡುತ್ತೇವೆ. ಎಲ್ಲ ಕಡೆ ತಿರುಗಾಡಿ ಪಕ್ಷ ಬಲಪಡಿಸಲಾಗುವುದು. ಹೀಗಾಗಿ ಹಿಂದುಳಿದ ವರ್ಗದವರು ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಬಲಪಡಿಸಬೇಕೆಂದರು. ದೇಶದಲ್ಲಿ ಎರಡು ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದೆ. ಆದರೆ ಬಿಜೆಪಿ ದೇಶದುದ್ದಕ್ಕೂ ಅಧಿಕಾರದಲ್ಲಿದೆ. ಹೀಗಾಗಿ ಹಣಬಲ- ತೊಳ್ಬಲದಿಂದ ಮತ್ತು ಜಾತಿ ವಿಷ ಬೀಜ ಬಿತ್ತಿ ಅಧಿಕಾರ ಪಡೆಯಲು ಹವಣಿಸುತ್ತಿರುವ ಕಾಂಗ್ರೆಸ್‌ಗೆ ತಕ್ಕ ಉತ್ತರ ನೀಡಿ ಎಂದು ಬಿಎಸ್ ವೈ ಕರೆ ನೀಡಿದರು.
Related Articles
Advertisement
ಕೇಂದ್ರದ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಹಿಂದುಳಿದ ವರ್ಗದವರಿಗೆ ಕೇಂದ್ರದ ಲ್ಲಿ 27 ಸಚಿವ ಸ್ಥಾನ ನೀಡಿದ್ದ ಲ್ಲದೇ ಶೇ. 27ರಷ್ಟು ಮೀಸಲಾತಿ ಕಲ್ಪಿಸಲಾಗಿದೆ ಎಂದರು.
ಬಿಎಸ್ ವೈ ಹೆಸರು ಹೇಳದಿದ್ದಕ್ಕೆ ಆಕ್ಷೇಪಸಮಾವೇಶದಲ್ಲಿ ಆಕ್ಷೇಪಿಸಿದ ಘಟನೆ ನಡೆಯಿತು. ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಅಧ್ಯಕ್ಷ ಡಾ. ಲಕ್ಷ್ಮಣ ಅವರು ಮಾತನಾಡುವಾಗ, ವೇದಿಕೆ ಮೇಲಿದ್ದ ಎಲ್ಲ ನಾಯಕರ ಹೆಸರು ಹೇಳಿದರು. ಆದರೆ ಬಿ.ಎಸ್. ಯಡಿಯೂರಪ್ಪ ಅವರ ಹೆಸರು ಹೇಳಲಿಲ್ಲ.ಇದನ್ನು ಗಮನಿಸಿದ ಕಾರ್ಯಕರ್ತರು ಬಿ. ಎಸ್.ಯಡಿಯೂರಪ್ಪನವರ ಹೆಸರು ಹೇಳಿ ಎಂದು ಸಮಾವೇಶದಲ್ಲಿ ಕಾರ್ಯಕರ್ತರು ಒಕ್ಕೋರಲಿನಿಂದ ಆಗ್ರಹಿಸಿದರು.