Advertisement

17 ಜನರಿಂದ BJP ಸರ್ಕಾರ ಅಧಿಕಾರಕ್ಕೆ ಬರಲಿಲ್ಲ;ಕಾರ್ಯಕರ್ತರ ಶ್ರಮದಿಂದ ಬಂದಿದೆ: ರೇಣುಕಾಚಾರ್ಯ

02:17 PM Nov 25, 2020 | Mithun PG |

ಬೆಂಗಳೂರು: ಹದಿನೇಳು ಜನರಿಂದ ಬಿಜೆಪಿ ಸರ್ಕಾರ ಬಂದಿದೆ ಎಂಬುದು ಸುಳ್ಳು. ಪಕ್ಷದ ಕಾರ್ಯಕರ್ತರ ಶ್ರಮದಿಂದ ರಾಜ್ಯದಲ್ಲಿ ಸರ್ಕಾರ ಬಂದಿದೆ ಎಂದು ವಿಧಾನಸೌಧದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.

Advertisement

105 ಶಾಸಕರು ಇಲ್ಲದೇ ಇದ್ದಿದ್ರೆ ಸರ್ಕಾರ ಹೇಗೆ ಆಗುತ್ತಿತ್ತು? ಪಕ್ಷದ ಕಾರ್ಯಕರ್ತರ ತಪಸ್ಸಿನಿಂದಾಗಿ 105 ಶಾಸಕರು ಗೆದ್ದಿದ್ದರು. ಮೊದಲು 105 ಶಾಸಕರು, ಆಮೇಲೆ ಉಳಿದವರು. ಯಾರೋ ಒಬ್ಬರಿಂದ ಸರ್ಕಾರ ಬಂದಿದೆ ಎಂದು ಹೇಳಲಾಗದು. ಲಕ್ಷಾಂತರ ಕಾರ್ಯಕರ್ತರ ಶ್ರಮದಿಂದ ಪಕ್ಷ  ಅಧಿಕಾರಕ್ಕೆ ಬಂದಿದೆ ಎಂದರು.

ಮೊದಲು 105  ಶಾಸಕರು. ನಂತರ  ಕಾಂಗ್ರೆಸ್, ಜೆಡಿಎಸ್ ನಿಂದ ಬೇಸತ್ತು 17 ಜನ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನನ್ನಿಂದಲೇ ಸರ್ಕಾರ ಬಂದಿದೆ ಅಂತಾ ಯಾರು ಹೇಳ್ತಾರೋ ಅವರು ಇದನ್ನ ಅರ್ಥ ಮಾಡಿಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕ್ಷೌರ ಮಾಡಲು ಹೋದವನನ್ನು ಅಟ್ಟಾಡಿಸಿ ಚಾಕುವಿನಿಂದ ಇರಿದು ಕೊಲೆ

ಸಚಿವ ಸಂಪುಟದ ಬಗ್ಗೆ ಮಾಹಿತಿ ಇಲ್ಲ. ಸಿಎಂ ವರಿಷ್ಠರ ಜೊತೆ ಚರ್ಚೆ ಮಾಡಿ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ. ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ‌ ಕೊಟ್ಟರೆ ತಪ್ಪೇನು ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಮಾತನಾಡಿ,  ಅದು ಅವರ ವೈಯಕ್ತಿಕ ಅಭಿಪ್ರಾಯ. ಅಂತಿಮವಾಗಿ ಪಕ್ಷದ ತೀರ್ಮಾನ ಮುಖ್ಯ ಎಂದರು.

Advertisement

ನಾವೂ ಸಹ ನಾಯಕರಿಗೆ ಕೆಲವೊಂದು ಸಲಹೆಗಳನ್ನು ಕೊಟ್ಟಿದ್ದೇವೆ. ಜನರಿಂದ ನೇರವಾಗಿ ಆಯ್ಕೆಯಾದವರಿಗೆ ಸಚಿವ ಸ್ಥಾನ ಕೊಡೋದು ಶಿಷ್ಟಾಚಾರ. ಪಕ್ಷ, ಸರ್ಕಾರಕ್ಕಿಂತ ಯಾರೂ ದೊಡ್ಡವರಲ್ಲ.

ಇಂದು ಹತ್ತು ಜನ ಶಾಸಕರು ಒಟ್ಟಿಗೆ ಸೇರಿದ್ದೆವು. ಅದು ಕೂಡ  ನಮ್ಮ ಮನೆಯಲ್ಲಿ ಉಪಹಾರಕ್ಕೆ ಸೇರಿದ್ದೆವು. ನಾವೇನು ರೆಸಾರ್ಟ್, ಹೋಟೆಲ್ ನಲ್ಲಿ ಸಭೆ ನಡೆಸಿಲ್ಲ. ನಮ್ಮ ಮನೆಯಲ್ಲಿ ಚರ್ಚೆ ನಡೆಸಿದ್ದೇವೆ.  ಆದಷ್ಟು ಬೇಗ  ಇಲ್ಲಿ ಚರ್ಚೆಯಾದ ವಿಚಾರಗಳನ್ನು ವರಿಷ್ಠರ ಗಮನಕ್ಕ ತರುತ್ತೇವೆ ಎಂದರು.

ಇದನ್ನೂ ಓದಿ: CBI ವಿಚಾರಣೆಗೆ ಹಾಜರಾಗುತ್ತೇನೆ; ಓಡಿಹೋಗುವವನಲ್ಲ ನಾನು: BJP ವಿರುದ್ಧ ಡಿಕೆಶಿ ವಾಗ್ದಾಳಿ !

Advertisement

Udayavani is now on Telegram. Click here to join our channel and stay updated with the latest news.

Next