ಬೆಂಗಳೂರು:ಕುಮಾರಸ್ವಾಮಿ ಕಾಂಗ್ರೆಸ್ ಬೆಂಬಲ ಪಡೆದು 14 ತಿಂಗಳು ಸಿಎಂ ಆಗಿರಲಿಲ್ಲವೆ? ಆಗ ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಸರಿಯಾಗಿತ್ತಾ? ಆಗ ಮಾತನಾಡಬೇಕಿತ್ತು. ಈಗ ಕಾಂಗ್ರೆಸ್ ಮೇಲೆ ಬೊಟ್ಟು ಮಾಡಿ ತೋರಿಸುವುದು ಎಚ್.ಡಿ.ಕೆಗೆ ಶೋಭೆ ತರುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಕೆ ಪಾಟೀಲ್ ಹೇಳಿಕೆ ನೀಡಿದ್ದಾರೆ.
ಇತ್ತೀಚೆಗಷ್ಷೆ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷದ ವಿರುದ್ಧ ನೀಡಿರುವ ಹೇಳಿಕೆಯ ಕುರಿತು ಪ್ರತಿಕ್ರಿಯೆ ನೀಡಿದ ಅವರು ಕುಮಾರ ಸ್ವಾಮಿ ಅವರನ್ನು ಟೀಕಿಸಿದರು.
ಇದನ್ನೂ ಓದಿ:ಗಡಿ ದಾಟಿ ಬಂದ ಪಾಕ್ ಆಕ್ರಮಿತ ಕಾಶ್ಮೀರದ ಇಬ್ಬರು ಬಾಲಕಿಯರನ್ನು ವಶಕ್ಕೆ ಪಡೆದ ಸೇನೆ
ಸಿದ್ದರಾಮಯ್ಯ ನೇತೃತ್ವದಲ್ಲಿ ಹಿರಿಯ ಶಾಸಕರ ಸಭೆ ಯ ಕುರಿತು ಪ್ರತಿಕ್ರಿಯೆ ನೀಡಿದ ಎಚ್.ಕೆ ಪಾಟೀಲ್ ನಾಳೆಯಿಂದ ಆರಂಭಗೊಳ್ಳಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚಿಸಲಿದ್ದೇವೆ ಎಂದರು.
ಈ ನಡುವೆ ರಾಜ್ಯ ಸರ್ಕಾರದ ಕುರಿತು ಮಾತನಾಡಿ ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಜನರ ನೆರವಿಗೆ ಧಾವಿಸಲಿಲ್ಲ. ಆರ್ಥಿಕ ಸಂಕಷ್ಟದಲ್ಲಿರುವ ಹಲವು ವರ್ಗಗಳಿಗೆ ಇನ್ನೂ ಪರಿಹಾರ ದೊರೆತಿಲ್ಲ.ಸಂಪುಟ ವಿಸ್ತರಣೆ ಗಲಾಟೆಯಲ್ಲಿ ಬಿಜೆಪಿ ಸರ್ಕಾರ ಆಡಳಿತವನ್ನೇ ಮರೆತಿದೆ. ಈ ಕಾರಣದಿಂದಾಗಿ ರಾಜ್ಯದಲ್ಲಿಅಭಿವೃದ್ದಿ ಕಾರ್ಯಗಳು ಕುಂಠಿತಗೊಂಡಿವೆ ಎಂದರು.