Advertisement

ಗೋವಾದಲ್ಲಿ ಬಿಜೆಪಿ ಸರ್ಕಾರ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ : ಪರಬ್

07:49 PM Jun 04, 2022 | Team Udayavani |

ಪಣಜಿ: ಗೋವಾ ರಾಜ್ಯದಲ್ಲಿ ಮತಾಂತರ ತಡೆ ಕಾಯ್ದೆ ಜಾರಿಗೆ ತರುವ ಸುಳಿವನ್ನು ನೀಡುವ ಮೂಲಕ ಬಿಜೆಪಿ ಸರ್ಕಾರ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ. ಈ ಕಾನೂನನ್ನು ಜಾರಿಗೊಳಿಸುವ ಮೊದಲು ಈ ಕಾನೂನಿನ ಬಗ್ಗೆ ಎಲ್ಲ ಮಾಹಿತಿ ನೀಡಬೇಕು ನಂತರ ಅದನ್ನು ಜಾರಿಗೊಳಿಸಬೇಕು ಎಂದು ರೆವೊಲ್ಯೂಷನ್ ಗೋವನ್ಸ್ ಪಕ್ಷದ ನಾಯಕ ಮನೋಜ್ ಪರಬ್ ಆಗ್ರಹಿಸಿದ್ದಾರೆ.

Advertisement

ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಪರಪ್ರಾಂತೀಯರು ಹೆಚ್ಚಾಗಿ ಮತಾಂತರಕ್ಕೆ ಒಳಗಾಗುತ್ತಿದ್ದಾರೆ. ಈ ಪರಪ್ರಾಂತೀಯರನ್ನು ತಮ್ಮತ್ತ ತಿರುಗಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಹೀಗಾಗಿ ಇದರ ಹಿಂದೆ ಬಿಜೆಪಿಯ ಹಿಡನ್ ಅಜೇಂಡಾ ಇರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಮತಾಂತರ ಸರಿಯಲ್ಲ. ಪ್ರತಿಯೊಂದು ಧರ್ಮವು ತನ್ನದೇ ಆದ ಭಾವನೆಗಳನ್ನು ಹೊಂದಿದೆ. ಯಾರನ್ನು ಮತಾಂತರ ಮಾಡಲು ಜನರು ಬಿಡಬಾರದು ಎಂದು ಮನೋಜ್ ಪರಬ್ ಹೇಳಿದರು.

ಗೋವಾದಲ್ಲಿ ಪೋರ್ಚುಗೀಸರ ಆಳ್ವಿಕೆ ಕಾಲದಲ್ಲಿ ಮತಾಂತರ ಮಾಡುವ ಸಂದರ್ಭದಲ್ಲಿ ದೇವಾಲಯಗಳನ್ನು ಕೆಡವಿಹಾಕಲಾಯಿತು. ಈ ದೇವಾಲಯಗಳನ್ನು ಪುನರ್ ನಿರ್ಮಾಣ ಮಾಡುವುದಾಗಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ಘೋಷಣೆ ಮಾಡಿದ್ದಾರೆ. ಬಿಜೆಪಿ ಸರ್ಕಾರವು ರಾಜ್ಯದಲ್ಲಿ ವಿವಿಧ ಯೋಜನೆಗಳಿಗಾಗಿ ಜನರ ಜಮೀನನ್ನು ಪಡೆದುಕೊಳ್ಳುತ್ತಿದೆ. ಮೋಪಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಲಕ್ಷಾಂತರ ಸ್ಕ್ವೇರ್ ಮೀಟರ್ ಜಮೀನನ್ನು ಜನರಿಂದ ಪಡೆದುಕೊಂಡಿದೆ. ಈ ಸಂದರ್ಭದಲ್ಲಿ ಅಲ್ಲಿರುವ ಧಾರ್ಮಿಕ ಸ್ಥಳಗಳನ್ನು ಕೂಡ ಸರ್ಕಾರ ಪರಿಗಣಿಸಿಲ್ಲ ಎಂದು ಮನೋಜ್ ಪರಬ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next