ಹುಣಸೂರು: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರಗಳ ಸಾಧನೆ ತಮ್ಮ ಗೆಲುವಿಗೆ ಶ್ರೀರಕ್ಷೆ ಎಂದು ಪದವೀಧರ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಮೈ.ವಿ.ರವಿಶಂಕರ್ ಅಭಿಪ್ರಾಯಪಟ್ಟರು.
ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾಲ್ಕು ಜಿಲ್ಲೆಗಳಿಂದ 1,33,034 ಮಂದಿ ಪದವೀಧರರು ನೋಂದಾಯಿಸಿಕೊಂಡಿದ್ದಾರೆ. ಚುನಾವಣಾ ನೋಟಿಫಿಕೇಷನ್ ಹೊರಡುವ ತನಕ ಮತ್ತೆ 10 ಸಾವಿರ ಮಂದಿ ನೋಂದಾಯಿಸಿಕೊಳ್ಳುವ ನಿರೀಕ್ಷೆ ಇದೆ ಎಂದರು.
ಹುಣಸೂರು ತಾಲೂಕಿನಲ್ಲಿ 3333 ಮಂದಿ ನೋಂದಾಯಿಸಿದ್ದು, ನಾಲ್ಕು ಜಿಲ್ಲೆಗಳಿಂದ ಬಿಜೆಪಿ ಕಾರ್ಯಕರ್ತರು 65 ಸಾವಿರಕ್ಕೂ ಹೆಚ್ಚು ಮಂದಿಯನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಿದ್ದಾರೆ. ಕ್ಷೇತ್ರದಲ್ಲಿ 21- 40 ವರ್ಷದೊಳಗಿನ 7೦ ಸಾವಿರ ಯುವ ಮತದಾರರಿದ್ದು ಹಾಗೂ ಸರಕಾರಿ ನೌಕರರಿಗೆ ಕೇಂದ್ರ ಸರಕಾರದ ಸಮಾನ ವೇತನ ನಿಗಧಿಗೆ ತೀರ್ಮಾನ, ಅತಿಥಿ ಉಪನ್ಯಾಸಕರಿಗೆ ಹೆಚ್ಚಿನ ಗೌರವಧನ ನಿಗಧಿಗೊಳಿಸಿದ್ದು ಹಾಗೂ ಜನಪರ ಕಾರ್ಯಕ್ರಮಗಳಿಂದ ಈ ಬಾರಿ ಬಿಜೆಪಿ ಅಭ್ಯರ್ಥಿಯಾದ ನನ್ನನ್ನು ಇತರರು ಬೆಂಬಲಿಸಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂಓದಿ:ಹಾಸನ ನಗರಸಭೆ ವಿರುದ್ಧ ಕಾನೂನು ಹೋರಾಟ: ಮಾಜಿ ಸಚಿವ ಎಚ್.ಡಿ.ರೇವಣ್ಣ
ಬಿಜೆಪಿ ಕಾರ್ಯಕರ್ತರು ವಿಧಾನಸಭಾ ಚುನಾವಣಾ ಮಾದರಿಯಲ್ಲಿ ಮತ ಯಾಚನೆಯಲ್ಲಿ ಮುಂದಿದ್ದಾರೆ. ಪಕ್ಷದ ಪ್ರತಿನಿಗಳು, ಮಂತ್ರಿಗಳು, ಮುಖಂಡರು ಸಹ ವ್ಯಾಪಕ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ತಾವು ಚುನಾಯಿತರಾದಲ್ಲಿ ಕ್ಷೇತ್ರ ಭೇಟಿ, ಅನುದಾನರಹಿತ ಶಾಲೆಗಳ ಶಿಕ್ಷಕರಿಗೆ ಆರೋಗ್ಯ ಕಾರ್ಡ್ ಕೊಡಿಸುವ ನಿಟ್ಟಿನಲ್ಲಿ ಕ್ರಮವಹಿಸುವೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗಾನಂದಕುಮಾರ್, ಗ್ರಾಮಾಂತರ ಅಧ್ಯಕ್ಷ ನಾಗಣ್ಣೇಗೌಡ, ನಗರಮಂಡಲ ಅಧ್ಯಕ್ಷ ಗಣೇಶ್‌ಕುಮಾರಸ್ವಾಮಿ ಇದ್ದರು.