Advertisement

ಗೋವಾದಲ್ಲಿ ಕೋವಿಡ್ ಸೋಂಕು ಹೆಚ್ಚಾಗಲು ಬಿಜೆಪಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

05:36 PM Jan 17, 2022 | Team Udayavani |

ಪಣಜಿ: ಗೋವಾದಲ್ಲಿ ಸದ್ಯ ಕೋವಿಡ್ ಪ್ರಕರಣಗಳು ಹೆಚ್ಚಲು ಬಿಜೆಪಿ ಸರ್ಕಾರವೇ ಕಾರಣವಾಗಿದೆ. ರಾಜ್ಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಬೇಕು. ಪ್ರಸ್ತುತ ರಾಜ್ಯದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದರೂ ಕೂಡ ರಾಜ್ಯ ಸರ್ಕಾರ ಯವುದೇ ಸಿದ್ಧತೆ ನಡೆಸಿಲ್ಲ. ಸರ್ಕಾರಿ ಕೇವಲ ವೈದ್ಯಕೀಯ ಕಾಲೇಜಿನ ಮೇಲೆ ಮಾತ್ರ ಆವಲಂಬಿತವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.

Advertisement

ಯುವ ಕಾಂಗ್ರೆಸ್ ಅಧ್ಯಕ್ಷ ವರದ್ ಮಾರ್ದೋಳಕರ್ ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ- ಅತ್ಯಂತ ಅಸಂವೇದನಾಶೀಲ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರವರು ಭೂತಕಾಲದಿಂದಲೂ ಕಲಿಯಲು ವಿಫಲರಾಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಸಾವಿರಾರು ಜನ ಕೋವಿಡ್‍ಗೆ ಬಲಿಯಾಗಿದ್ದಾರೆ. ಅವರು ಈಗಲೂ ಮತ್ತೆ ಅದೇ ತಪ್ಪನ್ನು ಮಾಡುತ್ತಿದ್ದಾರೆ. ಇದುವರೆಗೂ ಗೋವಾ ವೈದ್ಯಕೀಯ ಆಸ್ಪತ್ರೆಯನ್ನು ಹೊರತುಪಡಿಸಿ ಇತರ ಯಾವುದೇ ಆಸ್ಪತ್ರೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಸಿದ್ಧಪಡಿಸಿಲ್ಲ. ನೆರೆಯ ರಾಜ್ಯಗಳಲ್ಲಿ ಕರೋನಾ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ರಾಜ್ಯದಲ್ಲಿ ಸನ್‍ಬರ್ನ್ ಮತ್ತು ಪಾರ್ಟಿಗೆ ಅವಕಾಶ ನೀಡಿದ್ದಾರೆ. ಸದ್ಯ ಮುಖ್ಯಮಂತ್ರಿಗಳು 150 ಕ್ಕೂ ಹೆಚ್ಚು ಜನರೊಂದಿಗೆ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದು ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದಾರೆ ಎಂದು ವರದ್ ಮಾರ್ದೋಳಕರ್ ಆರೋಪಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಜನಾರ್ಧನ ಭಂಡಾರಿ, ಅರ್ಚಿತ್ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next