ಪಣಜಿ: ಮಹಾರಾಷ್ಟ್ರದಲ್ಲಿ ಶೀಘ್ರದಲ್ಲಿಯೇ ಬಿಜೆಪಿ ಸರ್ಕಾರ ಸ್ಥಾಪನೆಯಾಗಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿಕೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಸದ್ಯ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯ ಕುರಿತು ಪಣಜಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಮಹಾರಾಷ್ಟ್ರದಲ್ಲಿ ಶೀಘ್ರದಲ್ಲಿಯೇ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ. ಇಷ್ಟೇ ಅಲ್ಲದೆಯೇ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ರವರು ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ. ಮುಂಬರುವ ಸಮಯವು ಮಹಾರಾಷ್ಟ್ರ ರಾಜ್ಯದ ಭವಿಷ್ಯಕ್ಕೆ ಒಳ್ಳೆಯದು ಎಂದಿದ್ದಾರೆ.
ಇದನ್ನೂ ಓದಿ :ನೀವು ಬಿಜೆಪಿಗೆ ಸೇರ್ಪಡೆಯಾಗಿ,ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ: ಬಂಡಾಯ ಶಾಸಕರಿಗೆ ರಾವತ್
ಮಹಾರಾಷ್ಟ್ರದ ಬಂಡಾಯ ಶಾಸಕರನ್ನು ಈಬಾರಿ ಗೋವಾಕ್ಕೆ ಕರೆತರಲಿದ್ದೀರಾ..? ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಾವಂತ್, ಈ ವಿಷಯವನ್ನು ಸದ್ಯ ನಾನು ಮಾಧ್ಯಮಗಳೊಂದಿಗೆ ಮಾತನಾಡಲಾರೆ ಎಂದರು.