Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಯುವಕರಿಗೆ ಆಘಾತಕಾರಿ ವಿಚಾರ. ಪಿಎಸ್‌ಐ, ಲೋಕೋಪಯೋಗಿ, ಶಿಕ್ಷಣ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳಲ್ಲಿ ನೇಮಕಾತಿ ಅಕ್ರಮ ನಡೆದಿದೆ ಎಂದು ದೂರಿದರು.
Related Articles
Advertisement
ಇದ್ಯಾವುದೂ ನಡೆಯದೇ ಏಕಾಏಕಿ ಪರೀಕ್ಷೆ ರದ್ದು ಮಾಡಿ, ಮರು ಪರೀಕ್ಷೆಗೆ ಆದೇಶಿಸಿದರೆ ನಾವು ಸುಮ್ಮನಿರಲು ಸಾಧ್ಯವೇ. ಅಕ್ರಮದಲ್ಲಿ ಯಾರು ಭಾಗಿಯಾಗಿದ್ದಾರೆ, ಯಾರು ಯಾರಿಂದ ವಸೂಲಿ ಮಾಡಿದ್ದಾರೆ ಎಂಬುದು ಬಹಿರಂಗವಾಗಬೇಕು. ಮಾಗಡಿ ಕ್ಷೇತ್ರವೊಂದರಲ್ಲಿ ಎರಡು ಕೋಟಿ ರೂ. ಅಕ್ರಮ ನಡೆದಿದ್ದು ಇದರಲ್ಲಿ ಭಾಗಿಯಾಗಿರುವ ಸಚಿವರು ರಾಜೀನಾಮೆ ನೀಡಬೇಕು. ಕಾಂಗ್ರೆಸ್ ಪಕ್ಷ ಇದರ ಬಗ್ಗೆ ಹೋರಾಟ ಮಾಡುತ್ತದೆ. ಈ ವಿಚಾರವಾಗಿ ಯಾವುದೇ ವೇದಿಕೆಯಲ್ಲಿ ಚರ್ಚೆ ಮಾಡಲು ನಮ್ಮ ಪಕ್ಷದ ವಕ್ತಾರರು ಸಿದ್ಧರಿದ್ದಾರೆ ಎಂದು ಹೇಳಿದರು.
ಸ್ವಚ್ಛ ಮಾಡೋದು ಹೀಗೇನಾ ಭ್ರಷ್ಟಾಚಾರ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದರೂ ಪೊಲೀಸರು ಸರಿಯಾದ ತನಿಖೆ ನಡೆಸುತ್ತಿಲ್ಲ. ವಿಚಾರಣೆಗೆ ಕರೆಸಿದ ದರ್ಶನ್ ಗೌಡ ಯಾವ ಹೇಳಿಕೆ ಕೊಟ್ಟಿದ್ದಾನೆ. ಆತನನ್ನು ಯಾಕೆ ಪೂರ್ಣಪ್ರಮಾಣದಲ್ಲಿ ವಿಚಾರಣೆ ಮಾಡದೆ ಬಿಟ್ಟು ಕಳುಹಿಸಲಾಯಿತು. ಈ ವಿಚಾರವಾಗಿ ಯಾವುದೇ ಮಾಹಿತಿ ನೀಡುತ್ತಿಲ್ಲ ಯಾಕೆ. ಆತನ ವಿಚಾರಣೆ ಮಾಡಿದರೆ ಸಚಿವರ ಸಂಪರ್ಕ ಬಹಿರಂಗವಾಗುತ್ತದೆ ಎಂಬ ಕಾರಣಕ್ಕೆ ಆತನನ್ನು ಬಿಟ್ಟು ಕಳುಹಿಸಲಾಗಿದೆ. ರಾಮನಗರ ಸ್ವಚ್ಛ ಮಾಡುತ್ತೇನೆ ಎಂದು ಬಂದವರು ಮಾಡಿದ ಸ್ವತ್ಛ ಇದೇನಾ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತು ಯತ್ನಾಳ್ ಅವರಾಗಲಿ ಅಥವಾ ಬೇರೆ ಯಾರೇ ಮಾತನಾಡಿದರು ಅದು ನಮಗೆ ಪ್ರಮುಖ ವಿಚಾರವಲ್ಲ. ಸಮರ್ಥರು, ಅಸಮರ್ಥರು, ಯಾವ ಸೂತ್ರ ಬರುತ್ತದೆ ಎಂಬುದೂ ನಮಗೆ ಮುಖ್ಯವಲ್ಲ. ಮುಖ್ಯಮಂತ್ರಿ ಬದಲಾವಣೆ ಅವರ ಪಕ್ಷದ ವಿಚಾರ. ನಮಗೂ ಅದಕ್ಕೂ ಸಂಬಂಧವಿಲ್ಲ. ರಾಜ್ಯಕ್ಕೆ ಉತ್ತಮ ಆಡಳಿತ ಸಿಗಬೇಕು ಎಂಬುದು ಕಾಂಗ್ರೆಸ್ ಪಕ್ಷದ ಉದ್ದೇಶ. ಈ ರಾಜ್ಯ ಶಾಂತಿಯ ತೋಟವಾಗಬೇಕು, ಎಲ್ಲಾ ಧರ್ಮದವರಿಗೂ ರಕ್ಷಣೆ ಸಿಗಬೇಕು. ಸರ್ಕಾರ ಈ ಕೆಲಸ ಮಾಡಿದರೆ ಸಾಕು.
– ಡಿ.ಕೆ.ಶಿವಕುಮಾರ್