Advertisement
ಸದಾಶಿವನಗರ ನಿವಾಸದಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಚಾಮರಾಜನಗರದಲ್ಲಿ 24 ಜನರ ಸಾವಿಗೆ ಸರ್ಕಾರವೇ ಹೊಣೆ ಎಂದು ಹೈಕೋರ್ಟ್ ನೇಮಕ ಮಾಡಿದ್ದ ನ್ಯಾಯಮೂರ್ತಿಗಳ ಸಮಿತಿ ಈಗಾಗಲೇ ವರದಿ ಕೊಟ್ಟಿದೆ. ಇದಕ್ಕೆ ಸರ್ಕಾರದ ಯಾರು ಹೊಣೆಗಾರರು ಎಂದು ನೀವೇ ತೀರ್ಮಾನಿಸಿ. ಈ ಸಾವುಗಳಿಗೆ ಸರ್ಕಾರ ನೈತಿಕ ಹೊಣೆ ಹೊರಬೇಕು ಎಂದು ಆಗ್ರಹಿಸಿದ್ದಾರೆ.
Related Articles
Advertisement
45 ವರ್ಷ ಮೇಲ್ಪಟ್ಟವರಲ್ಲಿ ಅನೇಕರಿಗೆ ಇನ್ನು ಮೊದಲ ಲಸಿಕೆ ಕೊಟ್ಟಿಲ್ಲ. ಎರಡನೇ ಡೋಸ್ ಕೂಡ ಕೊಡಬೇಕು. ಈ ವಿಚಾರದಲ್ಲಿ ಸರ್ಕಾರದ ಬಳಿ ಪರಿಣಾಮಕಾರಿ ಯೋಜನೆ, ಸಿದ್ಧತೆ ಇಲ್ಲ. ಇದನ್ನು ನಿಭಾಯಿಸಲು ಇವರಿಗೆ ಆಗುತ್ತಿಲ್ಲ ಎಂದು ಆರೋಪಿಸಿದರು.
ರೈತರ ಪರಿಸ್ಥಿತಿ ದೇವರಿಗೇ ಪ್ರೀತಿ. ರಸಗೊಬ್ಬರ ಬೆಲೆ ಕಡಿಮೆಯಾಗಲಿಲ್ಲ. ಲಾಕ್ ಡೌನ್ ಸಂತ್ರಸ್ತ ಪ್ರತಿ ಕುಟುಂಬಕ್ಕೆ 10 ಸಾವಿರ ರುಪಾಯಿ ನೆರವು ನೀಡಬೇಕು ಎಂಬುದು ನಮ್ಮ ಆಗ್ರಹ. ಗೊಬ್ಬರದ ಬೆಲೆ ಕಡಿಮೆ ಮಾಡಬೇಕು. ತರಕಾರಿ, ಹೂ ಬೆಳೆದು, ನಷ್ಟ ಆದವರಿಗೆ ಪರಿಹಾರ ಕೊಡಬೇಕು. ಸಾಂಪ್ರದಾಯಿಕ ವೃತ್ತಿ ಆಧರಿಸಿದವರಿಗೆ, ಜಿಮ್, ಸಿನಿಮಾ ತಂತ್ರಜ್ಞರಿಗೆ ನೆರವು ಸಿಗಬೇಕು. ನಿಮ್ಮಿಂದ ಇದನ್ನು ನಿಭಾಯಿಸಲು ಆಗುತ್ತಿಲ್ಲ. ಕೋವಿಡ್ ಪ್ರಕರಣದ ಸಂಖ್ಯೆ ಕಡಿಮೆ ಮಾಡಲು ಪರೀಕ್ಷೆ ನಡೆಸುವುದನ್ನೇ ಕಡಿಮೆ ಮಾಡಿದ್ದೀರಿ. ಸರ್ಕಾರ ಬ್ಯಾಂಕ್ ಅಧಿಕಾರಿಗಳ ಸಭೆ ಕರೆದು ಬಡ್ಡಿ ಮನ್ನಾ ಮಾಡಬೇಕು, ಸಾಲದ ಕಂತು ಕಟ್ಟಲು ಕಾಲಾವಕಾಶ ನೀಡಬೇಕು. ಕೇಂದ್ರ ಸರ್ಕಾರವೇ ಲಸಿಕೆ ನೀಡಬೇಕು ಎಂದು ಕೇಳಬೇಕು. ರಾಜ್ಯದ ಹಣವನ್ನೇಕೆ ಇದಕ್ಕೆ ಬಳಸಬೇಕು? ಕೇಂದ್ರ ಸರಕಾರವೇ ಜವಾಬ್ದಾರಿ ಹೊರುವುದು ಜಗತ್ತಿನಾದ್ಯಂತ ಇರುವ ನೀತಿ. ಆದರೆ ಇಲ್ಲಿ ಅದು ಉಲ್ಟಾ ಆಗಿದೆ. ಸೋಂಕು ಹೆಚ್ಚಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.