Advertisement
ಯುವಮೋರ್ಚಾ ವತಿಯಿಂದ ಬೈಕ್ ರ್ಯಾಲಿ ಆಯೋಜಿಸಲಾಗಿದ್ದು, ಕಳೆದ ನಾಲ್ಕು ವರ್ಷದ ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು.
ಸಂಘಟಿಸುವುದು ಹಾಗೂ ಜನರಲ್ಲಿ ಬಿಜೆಪಿ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವುದು ಇದರ ಮೂಲ ಉದ್ದೇಶವಾಗಿದೆ ಎಂದು ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ತಮ್ಮೇಶ್‌ಗೌಡ ತಿಳಿಸಿದ್ದಾರೆ. ಸಮರ್ಥನೆಗಾಗಿ ಸಂಪರ್ಕ ಅಭಿಯಾನ’ ಹೆಸರಿನಡಿ ಬೈಕ್ ರ್ಯಾಲಿ ಆಯೋಜಿಸಲಾಗಿದ್ದು ರಾಜ್ಯಾದ್ಯಂತ ಯುವ ಮೋರ್ಚಾ ಕಾರ್ಯಕರ್ತರು ಪ್ರತಿ ವಿಧಾನಸಭೆ ಕ್ಷೇತ್ರಕ್ಕೂ ಹೋಗಿ ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ತಿಳಿಸಲಿದ್ದಾರೆ. ಇದರ ಜತೆಗೆ ಕ್ಷೇತ್ರದ ಗಣ್ಯರ ಜತೆ ಚರ್ಚೆ, ಸಂಘ-ಸಂಸ್ಥೆಗಳ ಜತೆ ಸಮಾಲೋಚನೆ, ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳ ಜತೆ ಸಂವಾದ ನಡೆಸಲಿದ್ದೇವೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್, ಮುದ್ರಾ , ಉಜ್ವಲಾ ಯೋಜನೆಗಳು ಲಕ್ಷಾಂತರ ಮಂದಿಯನ್ನು ತಲುಪಿದ್ದು ಆ ಆಯೋಜನೆಗಳ ಬಗ್ಗೆ ಜನರ ಪ್ರತಿಕ್ರಿಯೆ,ಕೇಂದ್ರ ಸರ್ಕಾರದ ಆಡಳಿತದ ಬಗ್ಗೆ ಅನಿಸಿಕೆ-ಅಭಿಪ್ರಾಯ ಪಡೆಯಲಾಗುವುದು. ಇದು ಮುಂದಿನ ಲೋಕಸಭೆ ಚುನಾವಣೆಗೆ ನಮಗೆ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.