Advertisement

ದೇಶದಲ್ಲಿ ದೊಡ್ಡ ಬದಲಾವಣೆ ತಂದ ಬಿಜೆಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

01:01 PM Apr 03, 2023 | Team Udayavani |

ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಂದ ನಂತರ ಈ ದೇಶದಲ್ಲಿ ದೊಡ್ಡ ಬದಲಾವಣೆ ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಅವರು ಇಂದು ಬಿಜೆಪಿ ಮಾಧ್ಯಮ ಕೇಂದ್ರ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಬಿಜೆಪಿ ಇಡೀ ವಿಶ್ವದಲ್ಲಿಯೇ ಅತಿ ದೊಡ್ಡ ಪಕ್ಷ. ಕರ್ನಾಟಕದಲ್ಲೂ ಕೂಡ ಬಹಳ ಆಳವಾಗಿ‌ ಬೇರೂರಿರುವ ಪಕ್ಷವಾಗಿದ್ದು, ಅತ್ಯಂತ ಉತ್ತಮ ಸಂಘಟನೆ ಹೊಂದಿರುವ ಪಕ್ಷ. ಕರ್ನಾಟಕದಲ್ಲಿ ಬಿಜೆಪಿ ಬೆಳೆದು ಬಂದು ತನ್ನದೇ ಆದ ಇತಿಹಾಸವನ್ನು ಹೊಂದಿದ ಏಕಾಂಗಿಯಾಗಿ ಪಕ್ಷ ಬೆಳೆಸಿದವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು. ಅವರ ನೇತೃತ್ವದಲ್ಲಿ ಬಿಜೆಪಿ ಪ್ರತಿ ಬಾರಿಯೂ ಬೆಳೆಯುತ್ತಾ ಬಂದಿದೆ. ದಿವಂಗತ ಅನಂತ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬೆಳೆದ ಪಕ್ಷ ರೈತರಿಗೆ ವಿಶೇಷ ಬಜೆಟ್ ಕೊಡುವುದರ ಜೊತೆಗೆ ಎಲ್ಲಾ ವರ್ಗಗಳಿಗೂ ಹಲವು ಯೋಜನೆಗಳನ್ನು ನೀಡಿದೆ ಎಂದರು.

ದೇಶದಲ್ಲಿ ಇದ್ದ ಯುಪಿಎ ಸರ್ಕಾರ ದೇಶದಲ್ಲಿ ಅಸ್ಥಿರತೆ ಉಂಟು ಮಾಡಿತ್ತು.  ಆರ್ಥಿಕವಾಗಿ ಅಸ್ಥಿರತೆ ಉಂಟಾಗಿ ಭ್ರಷ್ಟಾಚಾರದ ಸುರಿಮಳೆಯೇ ಆಯಿತು ಎಂದರು.

ಇದನ್ನೂ ಓದಿ:ಪರಿಷತ್ ಗೆ ರಾಜೀನಾಮೆ ಕೊಟ್ಟು ಶಿವಮೊಗ್ಗದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ: ಆಯನೂರು ಘೋಷಣೆ

Advertisement

ಪ್ರತಿಯೊಬ್ಬ ನಾಗರಿಕನಿಗೆ ಆತ್ಮವಿಶ್ವಾಸ ಮೂಡಬೇಕು. ನಾವು ಸುರಕ್ಷಿತವಾಗಿ ಇದ್ದೇವೆ ಎಂಬ ಭಾವನೆ ಬರಬೇಕು. ಈ ನಿಟ್ಟಿನಲ್ಲಿ ದೇಶದಲ್ಲಿ ಅತಿ ಹೆಚ್ಚು ಕಿ.ಮೀ ರಸ್ತೆ, ವಿಮಾನ ನಿಲ್ದಾಣ ಎಲ್ಲವೂ ಅಭಿವೃದ್ಧಿ ಆಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛ ಭಾರತ್ ಬಗ್ಗೆ ಮಾತಾಡುವಾಗ ವಿರೋಧ ಪಕ್ಷಗಳು ಹಾಸ್ಯ ಮಾಡಿದವು. ಒಂದು ಮನೆಯ ಸ್ವಚ್ಛತೆಯ ಬಗ್ಗೆ ಅರ್ಥ ಮಾಡಿಕೊಳ್ಳದೇ ಇರುವವರು 70 ವರ್ಷ ಆಡಳಿತ ಮಾಡಿದ್ದು ದುರ್ದೈವದ ಸಂಗತಿ ಎಂದರು.

ಏನು ಮಾಡಲಾಗಿದೆ ಎಂದು ಪ್ರಶ್ನಿಸುವ ಕಾಂಗ್ರೆಸ್ ಏನು ಮಾಡಿಲ್ಲ ಎಂದು ಸಿದ್ದರಾಮಯ್ಯನ ಮಾತಿನ ಶೈಲಿಯಲ್ಲೀ ಮಾತನಾಡಿ ವ್ಯಂಗ್ಯವಾಡಿದ ಮುಖ್ಯಮಂತ್ರಿಗಳು, ನಿಮ್ಮ ಆಡಳಿತದ ಅವಧಿಯಲ್ಲಿ ಏನು ಮಾಡಿದ್ದೀರಿ ಎಂದು ತೋರಿಸಿ ಎಂದರು.

ಚುನಾವಣೆಗೆ ಬಿಜೆಪಿ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದ್ದು, ನಾವು ಮಾಡಿದ ಸಾಧನೆಯ ವರದಿ ಹಿಡಿದು ಮತ ಕೇಳುತ್ತಿದ್ದೇವೆ. ಜೊತೆಗೆ ಕಾಂಗ್ರೆಸ್ ನ ದುರಾಡಳಿತದ ಬಗ್ಗೆಯೂ ಜನರಿಗೆ ತಿಳಿಸಲಾಗುವುದು. ಕಾಂಗ್ರೆಸ್ ಧರ್ಮ ಒಡೆಯುವ ಕೆಲಸ ಮಾಡಿದರು. ಆದರೆ ನಾವು ಧರ್ಮಗಳನ್ನು ಜೋಡಣೆ ಮಾಡುವ ಕೆಲಸ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಕೋಮು ಗಲಭೆಗಳಾದವು.  ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಹೋಗಿತ್ತು, ರಾಜ್ಯದ ಅಭಿವೃದ್ಧಿಯೇ ಆಗಿರಲಿಲ್ಲ, ಹೀಗಾಗಿ ಅವು ಕರಾಳ ದಿನಗಳು ಎಂದರು.

ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next