Advertisement
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ಆರೋಪಿಸಿರುವ ಬಿಜೆಪಿಯವರು ಅವರು ಆಳ್ವಿಕೆ ಮಾಡುತ್ತಿರುವ ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ರಾಜ್ಯಗಳಲ್ಲಿ ಕ್ರೈಮ್ ರೇಟ್ ಎಷ್ಟಿದೆ ಎಂದು ತಿಳಿದುಕೊಳ್ಳಲಿ ಎಂದು ತಿರುಗೇಟು ನೀಡಿದರು.
Related Articles
Advertisement
ಮುನಿಯಪ್ಪಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ: ಎರಡು ಹುದ್ದೆಯ ಗೊಂದಲದ ಬಗ್ಗೆ ಕೆ.ಎಚ್. ಮುನಿಯಪ್ಪ ಅವರಿಗೆ ನನ್ನ ಸಾಮರ್ಥ್ಯದ ಬಗ್ಗೆ ಗೊತ್ತಿಲ್ಲ ಹೀಗಾಗಿ ಅವರು ಈ ರೀತಿ ಮಾತನಾಡುತ್ತಿದ್ದಾರೆ. ಹೈ ಕಮಾಂಡ್ ಎರಡೂ ಹುದ್ದೆಯನ್ನು ನಾನು ನಿಭಾಯಿಸುತ್ತೇನೆ ಎಂಬ ನಂಬಿಕೆಯಿಂದಲೇ ಕೊಟ್ಟಿದೆ. ಒಬ್ಬರಿಗೆ ಒಂದು ಹುದ್ದೆ ಎಂಬ ಕಾಂಗ್ರೆಸ್ ನಿಯಮದಲ್ಲಿ ನನಗೆ ವಿನಾಯ್ತಿ ನೀಡಿದ್ದಾರೆ ಎಂದು ಪರಮೇಶ್ವರ್ ತಿಳಿಸಿದರು.
2 ವರ್ಷದಲ್ಲಿ ಪೊಲೀಸರ ನೇಮಕ ಪೂರ್ಣಬೆಂಗಳೂರು: ಮುಂದಿನ 2 ವರ್ಷಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. “2013 ರಿಂದ 17 ರ ವರೆಗೆ 22,457 ಪೊಲಿಸ್ ಪೇದೆ ಹಾಗೂ 1304 ಸಬ್ ಇನ್ಸ್ ಪೆಕ್ಟರ್ ನೇಮಕ ಮಾಡಲಾಗಿದೆ. ಮುಂದಿನ 2 ವರ್ಷದಲ್ಲಿ 16 ಸಾವಿರ ಪೊಲಿಸರನ್ನು ನೇಮಕ ಮಾಡಿಕೊಳ್ಳಲು ಈಗಾಗಲೇ ಹಣಕಾಸು ಇಲಾಖೆಯಿಂದ ಒಪ್ಪಿಗೆ ಪಡೆಯಲಾಗಿದೆ,’ ಎಂದು ಹೇಳಿದರು. ಕಲಬರಗಿ ಹಂತಕರ ಮಾಹಿತಿ ಇಲ್ಲ: ಸಾಹಿತಿ ಕಲಬುರ್ಗಿ ಅವರ ಹಂತಕರ ಬಗ್ಗೆ ಇನ್ನೂ ಮಾಹಿತಿ ದೊರೆತಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ. ಕಲಬುರ್ಗಿ ಹಂತಕರ ಪತ್ತೆಗೆ ಇಲಾಖೆ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಿದ್ದು, ತನಿಖೆ ಚುರುಕುಗೊಂಡಿದೆ. ದಾಬೋಲ್ಕರ್, ಗೋವಿಂದ ಪನ್ಸಾರೆ ಅವರನ್ನು ಹತ್ಯೆ ಮಾಡಿದವರೇ ಕಲಬುರ್ಗಿ ಅವರನ್ನು ಹತ್ಯೆ ಮಾಡಿರಬಹುದೆಂಬ ಶಂಕೆ ಇದೆ ಎಂದರು.