ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಬೊಬ್ಬಿಡುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರಕಾರ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಕೇಂದ್ರ ಸರಕಾರ ಪೆಟ್ರೋಲ್ ಪ್ರತೀ ಲೀಟರ್‌ಗೆ 32.98 ರೂ., ಡೀಸೆಲ್ ಪ್ರತೀ ಲೀಟರ್‌ಗೆೆ 31.83 ರೂ. ಅಬಕಾರಿ ಸುಂಕ ಸಂಗ್ರಹಿಸುತ್ತಿದೆ. ಇದರ ಬಗ್ಗೆ ಬಿಜೆಪಿ ನಾಯಕರು ಏಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದರು.
ಯುಪಿಎ ಸರಕಾರದ ಅವಧಿಯಲ್ಲಿ ಅಬಕಾರಿ ಸುಂಕ ಪೆಟ್ರೋಲ್‌ಗೆ 9.48 ರೂ., ಡೀಸೆಲ್‌ಗೆ 3.56 ರೂ. ವಿಧಿಸಲಾಗಿತ್ತು.
ಹಾಗಾಗಿಯೇ ಆಗ ಪೆಟ್ರೋಲ್ 68.31 ರೂ., ಡೀಸೆಲ್ 48.63 ರೂ.ಗೆ ದೊರೆಯುತ್ತಿತ್ತು. ಆದರೆ ಬಿಜೆಪಿ ಸರಕಾರ ಬಂದ ಮೇಲೆ ಪೆಟ್ರೋಲ್ 106 ರೂ ರೂ. ವರೆಗೆ ಹೋಗಿತ್ತು. ಯುಪಿಎ ಸರಕಾರದ ಅವಧಿಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ 97.68 ಡಾಲರ್ ಇತ್ತು. ಆಗ ಪೆಟ್ರೋಲ್ ಲೀಟರ್‌ಗೆ 68.31 ರೂ. ಇತ್ತು. ಈಗ ಕಚ್ಚಾ ತೈಲ ಬೆಲೆ 77.64 ಡಾಲರ್ ಇದ್ದರೂ ಬಿಜೆಪಿ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏಕೆ ಕಡಿಮೆ ಆಗಲಿಲ್ಲ ಎಂದು ಕೇಳಿದರು.