ಬಳ್ಳಾರಿ: ಲೋಕಸಭೆ ಚುನಾವಣೆಗೆ ಗಣಿನಾಡು ಬಳ್ಳಾರಿ ಎಸ್‌ಟಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು, ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಮಾದರಿಯಲ್ಲೇ ಹೊರಗಿನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪಕ್ಷ ತಂತ್ರ ರೂಪಿಸುತ್ತಿದೆ. ಕಳೆದ 2018ರಲ್ಲಿ ನಡೆದ ಲೋಕಸಭೆ ಉಪಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದ ಕಾಂಗ್ರೆಸ್‌ನಿಂದ ಈ ಚುನಾವಣೆಗೂ ಹಾಲಿಸಂಸದ ವಿ.ಎಸ್.ಉ ಗ್ರಪ್ಪಗೆ ಟಿಕೆಟ್ ಬಹುತೇಕ ಖಚಿತ ಎಂಬ ಮಾತುಗಳು ಕೇಳಿ ಬರುತ್ತಿವೆ. ಅದರಂತೆ ಕಳೆದ ಉಪಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಪರಾಭವಗೊಂಡಿದ್ದ ಹಿನ್ನೆಲೆಯಲ್ಲಿ ಸಾರ್ವತ್ರಿಕ ಚುನಾವಣೆಯಲ್ಲಿ ಸಮರ್ಥ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಬಿಜೆಪಿ ರಣತಂತ್ರ ರೂಪಿಸುತ್ತಿದೆ. ಇದಕ್ಕಾಗಿ ಜಿಲ್ಲೆಯ ಮಾಜಿ ಸಂಸದರು, ಮಾಜಿ ಶಾಸಕರು ಸೇರಿ ಹೊಸ ಅಭ್ಯರ್ಥಿಗಳೊಂದಿಗೆ ಹೊರ ಜಿಲ್ಲೆಯವರ ಹೆಸರು ಆಕಾಂಕ್ಷಿಗಳ ಪಟ್ಟಿಯಲ್ಲಿ ಕೇಳಿ ಬರುತ್ತಿದೆ. ಬಿಜೆಪಿ ಸ್ಪರ್ಧಾಕಾಂಕ್ಷಿಗಳು: ಬಳ್ಳಾರಿ ಎಸ್‌ಟಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಕೂಡ್ಲಿಗಿ ಶಾಸಕ ಎನ್.ವೈ.ಗೋಪಾಲಕೃಷ್ಣ ಉತ್ಸುಕರಾಗಿದ್ದು, ಜತೆಗೆ ಅವರ ಸಹೋದರ ಎನ್.ವೈ.ಹನುಮಂತಪ್ಪರ ಮಗ ಸುಜನ್ ಹೆಸರನ್ನೂ ಪ್ರಸ್ತಾಪಿಸಿದ್ದಾರೆ. ಅಲ್ಲದೇ, ಕಂಪ್ಲಿ ಮಾಜಿ ಶಾಸಕ ಟಿ.ಎಚ್.ಸುರೇಶ್‌ಬಾಬು, ರಾಯಚೂರು ಮಾಜಿ ಸಂಸದ ಸಣ್ಣ ಫಕ್ಕೀರಪ್ಪ, ಕಾಂಗ್ರೆಸ್‌ನ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರ ಸಹೋದರ ವೆಂಕಟೇಶ್ ಪ್ರಸಾದ್ ಅವರ ಹೆಸರು ಕೇಳಿಬರುತ್ತಿದೆ.
ಶೀಘ್ರ ಕೋರ್ ಕಮಿಟಿ ಸಭೆ: ಮಾಜಿ ಸಂಸದೆ ಜೆ.ಶಾಂತಾ ಅವರೂ ಕೊನೆಯ ಅವಕಾಶ ನೀಡುವಂತೆ ಪಕ್ಷದ ವರಿಷ್ಠರನ್ನು ಕೋರಿದ್ದಾರೆ.ಇವರೊಂದಿಗೆ ಹೊಸಪೇಟೆಯ ಕಟಿಗಿ ರಾಮಕೃಷ್ಣ, ಪಕ್ಷದ ಎಸ್‌ಟಿ ಮೋರ್ಚಾ ಕಾರ್ಯದರ್ಶಿಯಾಗಿದ್ದ ಶಿವಕುಮಾರ್, ಕೂಡ್ಲಿಗಿಯಬಂಗಾರು ಹನುಮಂತು, ಜಾರಕಿಹೊಳಿ ಸಂಬಂದಿ ಹರಪನಹಳ್ಳಿಯ ಅರಸಿಕೆರೆ ದೇವೇಂದ್ರಪ್ಪ ಎಂಬುವರು ಸಹ ಬಿಜೆಪಿ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ. ಶೀಘ್ರವೇ ಕೋರ್ ಕಮಿಟಿ ಸಭೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಹೊರಗಿನ ಅಭ್ಯರ್ಥಿ?
ಕಳೆದ ಲೋಕಸಭೆ ಉಪಚುನಾವಣೆಯಲ್ಲಿ 2.43 ಲಕ್ಷ ಅಂತರದಿಂದ ಜಯಗಳಿಸಿದ್ದ ಕಾಂಗ್ರೆಸ್‌ನ ಹಾಲಿ ಸಂಸದ ವಿ.ಎಸ್.ಉಗ್ರಪ್ಪ ವಿರುದಟಛಿ ಸಮರ್ಥ ಅಭ್ಯರ್ಥಿ ಕಣಕ್ಕಿಳಿಸುವ ಉದ್ದೇಶದಿಂದ ಬಿಜೆಪಿ ಯೋಜನೆ ರೂಪಿಸುತ್ತಿದೆ. ಅದಕ್ಕಾಗಿ ಬೆಳಗಾವಿಯ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಅವರನ್ನು ಬಳ್ಳಾರಿ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಸುವ ಕುರಿತು ಪಕ್ಷದ ವರಿಷ್ಠರ ನಡುವೆ ಚರ್ಚೆಗಳು ನಡೆಯುತ್ತಿವೆ ಎಂಬ ಮಾತುಗಳೂ ಕೇಳಿಬರುತ್ತಿವೆ.ಆದರೆ, ಈ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ. ಜಿಲ್ಲಾಧ್ಯಕ್ಷರು ಸೇರಿ ಯಾವೊಬ್ಬ ಮುಖಂಡರನ್ನೂ ಸಂಪರ್ಕಿಸಿಲ್ಲ.ರಾಜ್ಯ ಮುಖಂಡರಲ್ಲಿ ಚರ್ಚೆಗಳು ನಡೆಯು ತ್ತಿರಬಹುದು. ಸ್ಪರ್ಧಾಕಾಂಕ್ಷಿಗಳು ಕೇವಲ ಜಿಲ್ಲಾಧ್ಯಕ್ಷರಿಗೆ ಅರ್ಜಿ ಸಲ್ಲಿಸಬೇಕೆಂದೇನೂ ಇಲ್ಲ. ಪಕ್ಷದ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಅಧ್ಯಕ್ಷರ ಬಳಿಯೂ ಮಾತುಕತೆ ನಡೆಸಬಹುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ತಿಳಿಸಿದ್ದಾರೆ.
ಕೋರ್ ಕಮಿಟಿ ಸಭೆಯಲ್ಲಿ ಅಂತಿಮ
ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸುವ ಆಕಾಂಕ್ಷಿಗಳು ಹಲವರಿದ್ದರೂ, ಈ ಬಗ್ಗೆ ಈವರೆಗೂ ಪಕ್ಷದಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ. ಮಂಡ್ಯ, ಬಳ್ಳಾರಿ ಕ್ಷೇತ್ರ ಸೇರಿ ರಾಜ್ಯದ ಎರಡೂ¾ರು ಜಿಲ್ಲೆಗಳಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿಲ್ಲ. ಬಳ್ಳಾರಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಎರಡೂ¾ರು ಕ್ಷೇತ್ರಗಳ ಅಭಿಪ್ರಾಯ ಇನ್ನೂ ಬಂದಿಲ್ಲ. ಶೀಘ್ರದಲ್ಲೇ ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಪಕ್ಷದ ಕೋರ್‌ಕಮಿಟಿ ನಡೆಯಲಿದೆ. ಅಲ್ಲಿ ಸ್ಪರ್ಧಾಕಾಂಕ್ಷಿಗಳ ಬಗ್ಗೆ ಚರ್ಚಿಸಿ ಅಂತಿಮ ನಿರ್ಣಯ
ಕೈಗೊಳ್ಳಲಾಗುವುದು ಎಂದು ಪಕ್ಷದ ಮೂಲಗಳು ಸ್ಪಷ್ಟಪಡಿಸಿವೆ.
ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆ ಅಂತಿಮ ಚರ್ಚೆಗಳೇ ಇನ್ನೂ ನಡೆದಿಲ್ಲ. ಬೆಳಗಾವಿಯ ಲಖನ್ ಜಾರಕಿಹೊಳಿ ಸ್ಪರ್ಧಿಸುವುದಾದರೆ ಜಿಲ್ಲೆಯ ಒಂದಿಬ್ಬರನ್ನಾದರೂ ಸಂಪರ್ಕಿಸಬೇಕಿತ್ತು. ಅವರನ್ನು
ಕೇಳಿದರೂ ನನಗೂ ಗೊತ್ತಿಲ್ಲ ಎನ್ನುತ್ತಿದ್ದಾರೆ. ಮಾಜಿ ಸಂಸದೆ ಜೆ.ಶಾಂತಾ ರಾಜ್ಯ ಮುಖಂಡರನ್ನು ಸಂಪರ್ಕಿಸಿರಬಹುದು.
● ಚನ್ನಬಸವನಗೌಡ ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷರು, ಬಳ್ಳಾರಿ
ವೆಂಕೋಬಿ ಸಂಗನಕಲ್ಲು