Advertisement

Guarantee Scheme ಬಗ್ಗೆ ಪ್ರತಿಭಟನೆ ಮಾಡಲು ಬಿಜೆಪಿಗೆ ನೈತಿಕ ಹಕ್ಕಿಲ್ಲ; ಸಿದ್ದರಾಮಯ್ಯ

12:48 PM Jun 06, 2023 | Team Udayavani |

ಬೆಂಗಳೂರು: ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲು ಯಾವ ನೈತಿಕ ಹಕ್ಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

Advertisement

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 10 ಗಂಟೆಗಳ ವಿದ್ಯುತ್ ನೀಡುತ್ತೇವೆ, ಸಾಲ ಮನ್ನಾ ಮಾಡುತ್ತೇವೆ ಎಂದವರು ಯಾವುದನ್ನೂ ಜಾರಿಗೆ ತರಲಿಲ್ಲ. ಅವರು ಹೇಳಿದ್ದನ್ನು ಮಾಡದೇ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಾರೆ ಎಂದರು.

ಜನವಿರೋಧಿ ಪಕ್ಷವಾಗಿರುವ ಬಿಜೆಪಿ ಅಧಿಕಾರದಲ್ಲಿದ್ದಾಗ ಲೂಟಿ ಹೊಡೆದು, ರಾಜ್ಯಕ್ಕೆ ಕೆಟ್ಟ ಹೆಸರು ತಂದು ಹೊರಟರು. ನಮಗೆ ಈಗ ಪಾಠ ಹೇಳಿಕೊಡಲು ಬರುತ್ತಾರೆ ಎಂದರು. 2018 ರಲ್ಲಿ 600 ಭರವಸೆಗಳನ್ನು ನೀಡಿ ಅದರಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ ಎಂದು ಪ್ರಶ್ನಿಸಿದರು. ನಮ್ಮ ಸರ್ಕಾರ 15 ದಿನಗಳೊಳಗೆ ಎಲ್ಲಾ 15 ಗ್ಯಾರಂಟಿಗಳನ್ನು  ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದೆ. ಹಿಂದೆ ಅಧಿಕಾರದಲ್ಲಿದ್ದಾಗ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಇಂದಿರಾ ಕ್ಯಾಂಟೀನ್ ನಿಲ್ಲಿಸಿ, ಕೃಷಿ ಹಾಗೂ ಪಶುಭಾಗ್ಯ, ಶೂ ಭಾಗ್ಯ ಸೈಕಲ್ ಕೊಡುವುದನ್ನು ಬಿಜೆಪಿ ನಿಲ್ಲಿಸಿದರು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next