Advertisement

ರಾಜ್ಯದಲ್ಲಿ ಬಿಜೆಪಿ ಅಭಿವೃದ್ಧಿ ಕೆಲಸ ಮಾಡಿಲ್ಲ: ಡಿ.ಕೆ.ಶಿವಕುಮಾರ್‌

11:43 PM Feb 04, 2023 | Shreeram Nayak |

ವಿಜಯಪುರ: ದೇವನಹಳ್ಳಿಯು ಇತಿಹಾಸ ಹೊಂದಿರುವ ಭೂಮಿ ಯಾಗಿದ್ದು, ಇಲ್ಲಿಂದ ಕಾಂಗ್ರೆಸ್‌ ಸರಕಾರವನ್ನುಅಧಿಕಾರಕ್ಕೆ ತರಲು ಪಣ ತೊಡಬೇಕು ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

Advertisement

ನಗರದಲ್ಲಿ ಆಯೋಜಿಸಿದ್ದ ಎರಡನೇ ಹಂತದ “ಪ್ರಜಾಧ್ವನಿ’ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾ ಡಿದ ಅವರು, ಬಿಜೆಪಿ ಬಂದ ಮೇಲೆ ತಾಲೂಕಿನಲ್ಲಿ ರೈತರು ಎಲ್ಲ ಭೂಮಿಯನ್ನೂ ಕಳೆದುಕೊಂಡಿದ್ದಾರೆ. ಈ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಸರಕಾರ ಬಂದ ಮೇಲೆ ಎಲ್ಲರೂ ಬೀದಿಗೆ ಬಿದ್ದಿದ್ದಾರೆ. ಮಹಾನ್‌ ನಾಯಕರ ಇತಿಹಾಸವನ್ನೇ ಬಿಜೆಪಿ ತಿರುಚುತ್ತಿದೆ. ರಾಜ್ಯದಲ್ಲಿ ಬಿಜೆಪಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಕೇವಲ ಶೇ.40 ಕಮಿಷನ್‌ ಪಡೆಯುವುದೇ ಸರಕಾರದ ಕೆಲಸವಾದಂತಿದೆ. ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಹೋಗಿವೆ ಎಂದು ಆರೋಪಿಸಿದರು.

ಮಾಜಿ ಸಚಿವ ಕೃಷ್ಣ ಭೈರೇಗೌಡ, ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ, ಶಾಸಕ ಡಾ| ಜಿ. ಪರಮೇಶ್ವರ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಲಿ, ಶಾಸಕ ವೆಂಕಟರಮಣಪ್ಪ, ಶರತ್‌ ಬಚ್ಚೇಗೌಡ, ಎಂಎಲ್‌ಸಿ ರವಿ, ನಾಸೀರ್‌, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್‌ ಮುಂತಾದವರಿದ್ದರು.

ಮೋದಿ ಸುಳ್ಳಿನ ಸರದಾರ
ಬಿಜೆಪಿ ಪಕ್ಷ ಬರೀ ಸುಳ್ಳಿನ ಪಕ್ಷವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳಿನ ಸರದಾರ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ, ನಮ್ಮ ಕಾಂಗ್ರೆಸ್‌ ಪಕ್ಷ ಹೇಳಿದಂತೆ ಎಲ್ಲ ಅಭಿವೃದ್ಧಿ ಕೆಲಸಗಳು ಮಾಡಿವೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಆರೋಪಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next