Advertisement

ಬಿಜೆಪಿಯು ರಾಮನಿಂದ ಸೀತೆಯನ್ನು ಬೇರ್ಪಡಿಸಿದೆ: ಕಾಂಗ್ರೆಸ್ ನಾಯಕ ಗೆಹ್ಲೋಟ್

04:12 PM Dec 25, 2022 | Team Udayavani |

ಜೈಪುರ: ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ಯಾತ್ರೆ’ಯ ವೇಳೆ ‘ಜೈ ಸೀತಾರಾಮ್’ ಘೋಷಣೆಗೆ ಸಂಬಂಧಿಸಿದಂತೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತೊಮ್ಮೆ ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

Advertisement

ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ಗುರಿಯಾಗಿಸಿ ಅಶೋಕ್ ಗೆಹ್ಲೋಟ್, “ಅವರು ಸೀತೆಯನ್ನು ರಾಮನಿಂದ ಬೇರ್ಪಡಿಸಿದ್ದಾರೆ. ಅದಕ್ಕಾಗಿಯೇ ನಾವು ‘ಜೈ ಸೀತಾ ರಾಮ್ ಬೋಲೋ’ ಎಂದು ಹೇಳುತ್ತೇವೆ. ನಾವು ‘ಜೈ ಸೀತಾರಾಮ್’ ಎಂದು ಹೇಳಿದಾಗ ನಮಗೆ ಜನರಿಂದ ಅಗಾಧ ಪ್ರತಿಕ್ರಿಯೆಗಳು ಬರುತ್ತವೆ” ಎಂದು ಹೇಳಿದರು.

ಬಿಜೆಪಿಯ ಒಡೆದು ಆಳುವ ನೀತಿಯನ್ನು ಜನರು ಈಗ ಅರ್ಥ ಮಾಡಿಕೊಂಡಿದ್ದಾರೆ ಎಂದು ಗೆಹ್ಲೋಟ್ ಹೇಳಿದರು.

‘ಜೈ ಶ್ರೀ ರಾಮ್’ ಘೋಷಣೆ ಮಾಡುವ ಮೂಲಕ ಕೋಪ ಮತ್ತು ಭಯವನ್ನು ಕೆರಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ರಾಹುಲ್ ಗಾಂಧಿ ಗಾಂಧಿಯವರ ಆದರ್ಶಗಳನ್ನು ಅನುಸರಿಸುತ್ತಾರೆ, ಅವರು ಪ್ರೀತಿಯ ಮೂಲಕ ಭಯವನ್ನು ಜಯಿಸುತ್ತಾರೆ” ಎಂದು ಗೆಹ್ಲೋಟ್ ಹೇಳಿದರು.

ಇದನ್ನೂ ಓದಿ:ಕಾಲ ಬಂದಾಗ ಎಲ್ಲವುದಕ್ಕೂ ಉತ್ತರ ಕೊಡುತ್ತೇನೆ; ರೆಡ್ಡಿ ಹೊಸಪಕ್ಷಕ್ಕೆ ರಾಮುಲು ಪ್ರತಿಕ್ರಿಯೆ

Advertisement

ಭಾನುವಾರ ಜೈಪುರದಲ್ಲಿ 167 ಹೊಸ ಬೇಸಿಕ್ ಲೈಫ್ ಸಪೋರ್ಟ್ ಆಂಬ್ಯುಲೆನ್ಸ್ ಸೇವೆ 108 ಅನ್ನು ಪ್ರಾರಂಭಿಸುವ ಹಿನ್ನೆಲೆಯಲ್ಲಿ ಗೆಹ್ಲೋಟ್ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು. ಕಾರ್ಯಕ್ರಮದಲ್ಲಿ ವೈದ್ಯಕೀಯ ಮತ್ತು ಆರೋಗ್ಯ ಸಚಿವ ಪರ್ಸಾದಿ ಲಾಲ್ ಮೀನಾ, ನೀರು ಸರಬರಾಜು ಸಚಿವ ಡಾ ಮಹೇಶ್ ಜೋಶಿ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಡಾ ಸುಭಾಷ್ ಗರ್ಗ್ ಸೇರಿದಂತೆ ಅನೇಕ ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next