Advertisement

ಮತಾಂಧ ಬಾಬರ್ ಮೂಲ ಹಾಗೂ ಇಂದಿರಾ ಗಾಂಧಿ ಮೂಲ ಒಂದೇ ಆಗಿದೆಯೇ: ಸಿದ್ದರಾಮಯ್ಯಗೆ BJP ತಿರುಗೇಟು

01:18 PM May 28, 2022 | Team Udayavani |

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರ್‌ಎಸ್‌ಎಸ್‌) ಮೂಲವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೆಣಕಿರುವುದು ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಬಿಜೆಪಿಯು ಸಿದ್ದರಾಮಯ್ಯ ಅವರನ್ನು ಬುರುಡೆ ರಾಮಯ್ಯ ಎಂಬ ಹ್ಯಾಶ್ ಟ್ಯಾಗ್ ಅಡಿಯಲ್ಲಿ ಸರಣಿ ಕೂ ಮಾಡುವ ಮೂಲಕ ಟೀಕೆ ಮಾಡಿದೆ.

Advertisement

ಆಫ್ಘಾನಿಸ್ತಾನದ ಬಾಬರ್ ಸಮಾಧಿಗೆ, 1959ರಲ್ಲಿ ನೆಹರೂ 1968ರಲ್ಲಿ ಇಂದಿರಾ ಗಾಂಧಿ 2005ರಲ್ಲಿ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ! ‌ಭೇಟಿಯ ಬಳಿಕ “ಮೈ ಟ್ರೂ ಹೋಮ್‌ ಕಮಿಂಗ್” ಎಂದು ಇಂದಿರಾ ಉದ್ಘರಿಸಿದ್ದರು. ಸಾವಿರಾರು ಹಿಂದೂಗಳನ್ನು ಹತ್ಯೆಗೈದ ಬಾಬರ್ ಎಂಬ ಮತಾಂಧನ ಮೂಲ ಹಾಗೂ ಇವರ ಮೂಲ ಎರಡೂ ಒಂದೇ ಆಗಿದೆಯೇ ಎಂದು ಬಿಜೆಪಿ ಪ್ರಶ್ನಿಸಿದೆ.

ಸ್ವಾತಂತ್ರ್ಯಾ ನಂತರ ಕಾಂಗ್ರೆಸ್​ ಪಕ್ಷವನ್ನು ವಿಸರ್ಜನೆ ಮಾಡಬೇಕು ಎಂದು ಮಹಾತ್ಮ ಗಾಂಧಿ ಹೇಳಿದ್ದರು. ಈಗಿರುವ ಕಾಂಗ್ರೆಸ್ ಪಕ್ಷ, ಇಂದಿರಾ ಕಾಂಗ್ರೆಸ್ ಪಕ್ಷ ಮತ್ತು ನಕಲಿ ಗಾಂಧಿಗಳ ಪಕ್ಷ. ಅಂದಹಾಗೆ ಸಿದ್ದರಾಮಯ್ಯ ಅವರೇ, ನೀವು ಕೂಡ ಜನತಾದಳ ಪಕ್ಷದಿಂದ, ಅಧಿಕಾರದ ಮೋಹದಿಂದ ನಕಲಿ ಗಾಂಧಿ ಪಕ್ಷಕ್ಕಕ್ಕೆ ಬಂದವರಲ್ಲವೇ ಎಂದು ಬಿಜೆಪಿ ತಿರುಗೇಟು ನೀಡಿದೆ.

Koo App

ಸ್ವಾತಂತ್ರ್ಯಾ ನಂತರ ಕಾಂಗ್ರೆಸ್​ ಪಕ್ಷವನ್ನು ವಿಸರ್ಜನೆ ಮಾಡಬೇಕು ಎಂದು ಮಹಾತ್ಮ ಗಾಂಧಿ ಹೇಳಿದ್ದರು. ಈಗಿರುವ ಕಾಂಗ್ರೆಸ್ ಪಕ್ಷ, ಇಂದಿರಾ ಕಾಂಗ್ರೆಸ್ ಪಕ್ಷ ಮತ್ತು ನಕಲಿ ಗಾಂಧಿಗಳ ಪಕ್ಷ. ಅಂದಹಾಗೆ ಸಿದ್ದರಾಮಯ್ಯ ಅವರೇ, ನೀವು ಕೂಡ ಜನತಾದಳ ಪಕ್ಷದಿಂದ, ಅಧಿಕಾರದ ಮೋಹದಿಂದ ನಕಲಿ ಗಾಂಧಿ ಪಕ್ಷಕ್ಕಕ್ಕೆ ಬಂದವರಲ್ಲವೇ? #ಬುರುಡೆರಾಮಯ್ಯ

Advertisement

BJP KARNATAKA (@BJP4Karnataka) 28 May 2022

ಇದನ್ನೂ ಓದಿ:ಎಂಟು ವರ್ಷದಲ್ಲಿ ಜನರು ತಲೆ ತಗ್ಗಿಸುವಂತಹ ಕೆಲಸ ನಾವು ಮಾಡಿಲ್ಲ: ನರೇಂದ್ರ ಮೋದಿ

ನೀವು ಯಾರ ವಿಶ್ವಾಸಕ್ಕಾಗಿ ಹೇಳಿಕೆ ನೀಡುತ್ತಿದ್ದೀರೋ, ಅವರ ಮೂಲ ನಿಮಗೆ ತಿಳಿದಿಲ್ಲವೇ? ಫಿರೋಜ್ ಗಾಂಧಿ – ಫಿರೋಜ್ ಜೆಹಾಂಗೀರ್ ಗ್ಯಾಂಡಿ, ಪರ್ಷಿಯನ್‌ ಮೂಲ. ಸೋನಿಯಾ ಗಾಂಧಿ – ಎಡ್ವಿಜ್ ಆಂಟೋನಿಯಾ ಅಲ್ಬಿನಾ ಮೈನೊ, ಇಟಲಿ ಮೂಲ, ರಾಹುಲ್ ಗಾಂಧಿ – ರೌಲ್ ವಿನ್ಸಿ. ಸಿದ್ದರಾಮಯ್ಯನವರೇ, ಇಂದಿರಾ ಕಾಂಗ್ರೆಸ್‌, ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ ಆಗಿದ್ದೇಗೆ? ಇಂದಿರಾ ಪ್ರಿಯದರ್ಶಿನಿ ಗ್ಯಾಂಡಿ, ಇಂದಿರಾ ಗಾಂಧಿ ಆಗಿದ್ದು ಹೇಗೆ ಎಂದು ಬಿಜೆಪಿ ಪ್ರಶ್ನಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next