Advertisement

BJP; ನಾನು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ: ಪ್ರಹ್ಲಾದ ಜೋಶಿ

11:44 PM Mar 13, 2024 | Team Udayavani |

ಹುಬ್ಬಳ್ಳಿ: ಪ್ರಧಾನಿ ಮೋದಿ ಅವರು ದೇಶದ ಅತ್ಯಂತ ಜನಪ್ರಿಯ ನಾಯಕರು. ನಾನು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಬುಧವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಿಂದ ಇಂದು 72 ಸ್ಥಾನಗಳಿಗೆ ಟಿಕೆಟ್ ಘೋಷಣೆಯಾಗಿದ್ದು, ಕರ್ನಾಟಕದಲ್ಲಿ 20 ಅಭ್ಯರ್ಥಿಗಳಲ್ಲಿ ಧಾರವಾಡಕ್ಕೆ ನನ್ನನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದಾರೆ. ಮೋದಿ, ಜೆಪಿ ನಡ್ಡಾ, ಅಮಿತ್ ಶಾ ಅವರಿಗೆ ಕೃತಜ್ಞತೆ ಎಂದರು.

ದೇಶದಲ್ಲಿ ಎನ್ ಡಿಎ 400 ಸ್ಥಾನ ಗೆಲ್ಲಲಿದೆ. ಮೂರನೇ ಬಾರಿಗೆ ನಾವು ದಾಖಲೆ ವಿಜಯ ಸಾಧಿಸುತ್ತೇವೆ. ಆದಷ್ಟು ಬೇಗ ಮುಂದಿನ ಅಭ್ಯರ್ಥಿ ಘೋಷಣೆ ಆಗಲಿದೆ ಎಂದರು.

ಹೊಸ ಮುಖಗಳಿಗೆ ಮಣೆ ಹಾಕಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಗೆಲುವಿನ ಪ್ರಮಾಣ ನೋಡಿ ಕೆಲ ಕಡೆ ಬದಲಾವಣೆ ಆಗಿದೆ. ಇದು ಸಾಮಾನ್ಯ ಪ್ರತಿಕ್ರಿಯೆ. ಅದು ರಾಷ್ಟ್ರೀಯ ನಾಯಕರ ತೀರ್ಮಾನ. ಕಟೀಲು ಅವರು ರಾಜ್ಯಾಧ್ಯಕ್ಷರಾಗಿದ್ದರು. ನಾವು ಯಾರನ್ನು ಕೈ ಬಿಡಲ್ಲ, ಅವರಿಗೆ ಜವಬ್ದಾರಿ ಕೊಡುತ್ತೇವೆ ಎಂದರು.

ಕಾಂತೇಶ್ ಗೆ ಟಿಕೆಟ್ ತಪ್ಪಿರುವ ವಿಚಾರವಾಗಿ, ಅದು ರಾಷ್ಟ್ರೀಯ ನಾಯಕರ ನಿರ್ಧಾರ. ಎಲ್ಲಿ ಗೆಲ್ಲುತ್ತೇವೆ ಅಲ್ಲಿ ಸ್ಪರ್ಧೆ ಇದ್ದೆ ಇರುತ್ತದೆ. ಎಲ್ಲವೂ ಸರಿಯಾಗುತ್ತದೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಟಿಕೆಟ್ ಕೇಳುವ ಹಕ್ಕಿದೆ ಎಂದರು.

Advertisement

ಕಾಂಗ್ರೆಸ್ ನಲ್ಲಿ ಅಭ್ಯರ್ಥಿ ಗಳೇ ಇಲ್ಲ. ಅಲ್ಲಿ ಸ್ಪರ್ಧೆಗೆ ಉತ್ಸಾಹವಿಲ್ಲ. ಬಿಜೆಪಿಯಲ್ಲಿ ದೊಡ್ಡ ಪಟ್ಟಿ ಇದೆ. ಯದುವೀರ್ ಅವರನ್ನು ಮನವೊಲಿಸಿದ್ದು ಯಡಿಯೂರಪ್ಪ. ಜಗದೀಶ ಶೆಟ್ಟರ್ ಅವರು ನನಗೆ ಟಿಕೆಟ್ ತಪ್ಪಿಸುವ ಪ್ರಯತ್ನ ಮಾಡಿಲ್ಲ. ನಾನು ಅವರನ್ನ ಟೀಕಿಸಲ್ಲ. ನನ್ನ ವಿರುದ್ಧ ಯಾವುದೇ ಅಭ್ಯರ್ಥಿ ಆಗಲಿ ನಾನು ಮೂರು ಲಕ್ಷ ಲೀಡ್ ನಿಂದ ಗೆಲ್ಲುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next