Advertisement

ಮಸ್ಕಿಯಲ್ಲಿ ಬಿಜೆಪಿ, ತುರ್ವಿಹಾಳದಲ್ಲಿ ಕಾಂಗ್ರೆಸ್;ಕೆಲವೆಡೆ ಅತಂತ್ರ

12:08 PM Dec 30, 2021 | Team Udayavani |

ರಾಯಚೂರು: ಸ್ಥಳೀಯ ಸಂಸ್ಥೆಗಳ ಫಲಿತಾಂಶ ಹೊರಬಿದ್ದಿದ್ದು, ಮಸ್ಕಿ ಪುರಸಭೆ ಬಿಜೆಪಿ ತೆಕ್ಕೆಗೆ ಜಾರಿದರೆ, ತುರ್ವಿಹಾಳ ಕಾಂಗ್ರೆಸ್ ಪಾಲಾಗಿದೆ. ಇನ್ನೂ ಬಳಗಾನೂರು, ಕವಿತಾಳ, ಸಿರವಾರ ಪಟ್ಟಣ ಪಂಚಾಯಿತಿಯಲ್ಲಿ ಯಾವುದೇ ಪಕ್ಷಕ್ಕೆ ನಿಚ್ಚಳ ಬಹುಮತ‌ ಸಿಗದ ಕಾರಣ ಅತಂತ್ರ ಸ್ಥಿತಿ ಏರ್ಪಟ್ಟಿದೆ. ಬಳಗಾನೂರು ಪಟ್ಟಣ ಪಂಚಾಯಿತಿಯಲ್ಲಿ ಪಕ್ಷೇತರರೇ ನಿರ್ಣಾಯಕರಾಗಿದ್ದಾರೆ.

Advertisement

ಮಸ್ಕಿ ಪುರಸಭೆಯಲ್ಲಿ ಒಟ್ಟು 23 ಸ್ಥಾನಗಳಲ್ಲಿ ಬಿಜೆಪಿ‌ಗೆ 14 ಲಭಿಸಿದರೆ, ಕಾಂಗ್ರೆಸ್ 9 ಸ್ಥಾನ ಪಡೆದಿದೆ. ಇನ್ನೂ ಬಳಗಾನೂರು ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ‌ಗೆ 6 ಸ್ಥಾನ ಸಿಕ್ಕರೆ, ಕಾಂಗ್ರೆಸ್ 5, ಒಬ್ಬ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಸಿಂಧನೂರು ತಾಲೂಕಿನ ತುರುವಿಹಾಳ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ಪಾಲಾಗಿದೆ. ಕಾಂಗ್ರೆಸ್ 9 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರ ಚುಕ್ಕಾಣಿ ಹಿಡಿದರೆ, ಬಿಜೆಪಿ ಕೇವಲ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಮೂವರು ಪಕ್ಷೇತರರು ಗೆಲುವು ಸಾಧಿಸಿದ್ದಾರೆ.

ಇನ್ನೂ ಸಿರವಾರ ಪಟ್ಟಣ ಪಂಚಾಯಿತಿಯಲ್ಲಿ ಒಟ್ಟು 20 ಸ್ಥಾನಗಳಲ್ಲಿ ಕಾಂಗ್ರೆಸ್ 9 ಸ್ಥಾನಗಳಲ್ಲಿ ಗೆಲವು ಸಾಧಿಸಿದರೆ, ಬಿಜೆಪಿ 6, ಜೆಡಿಎಸ್ 3 ಹಾಗೂ ಪಕ್ಷೇತರರು ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಇಲ್ಲೂ ಸದ್ಯಕ್ಕೆ ಅತಂತ್ರ ಪರಿಸ್ಥಿತಿ ಏರ್ಪಟ್ಟಿದೆ. ಕವಿತಾಳ ಪಟ್ಟಣ ಪಂಚಾಯಿತಿಯಲ್ಲಿಯೂ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಒಟ್ಟು 16 ಸ್ಥಾನಗಳಲ್ಲಿ 8ರಲ್ಲಿ  ಕಾಂಗ್ರೆಸ್ ಗೆಲುವು ಸಾಧಿಸಿದರೆ, 4 ಬಿಜೆಪಿ, ಮೂರು ಜೆಡಿಎಸ್ ಹಾಗೂ ಒಬ್ಬ ಪಕ್ಷೇತರರು ಗೆಲುವು ಸಾಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next