ಚಿಕ್ಕಮಗಳೂರು: ಜನ ಮತ್ತೊಮ್ಮೆ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದ ಬಯಕೆಯಲ್ಲಿದ್ದಾರೆ. ಈ ಬಾರಿ ಕಳೆದ ಬಾರಿಗಿಂತ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಕಾಂಗ್ರೆಸ್ ಭ್ರಷ್ಟಾಚಾರ ಹುಟ್ಟುಹಾಕಿದ ರಕ್ತಬೀಜಾಸುರ ಪಕ್ಷ. ನೆಹರೂ ಕಾಲದಿಂದ ಮನಮೋಹನ್ ಸಿಂಗ್ ಕಾಲದವರೆಗೂ ಭ್ರಷ್ಟಾಚಾರ ತಾಂಡವವಾಡುತ್ತಿತ್ತು ಎಂದರು.
ಇದನ್ನೂ ಓದಿ:ಕಲ್ಯಾಣ ಕರ್ನಾಟಕದಲ್ಲಿ ಇನ್ನಷ್ಟು ಚುರುಕಿನ ಕೆಲಸಗಳು ಆಗಬೇಕಿತ್ತು: ಶೆಟ್ಟರ್ ಇಂಗಿತ
ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ಯಾಕೆ ಬಂದ್ ಮಾಡಿತ್ತು. ಹಲ್ಲಿಲ್ಲದ ಹುಲಿ ಮಾಡಿ, ಎಸಿಬಿಗೂ ಪವರ್ ಇಲ್ಲದಂತೆ ಮಾಡಿದರು. ನಾವು ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿದ್ದೇವೆ. ಸಿಎಂ, ಸರ್ಕಾರ ತಡೆಯಬಹುದಿತ್ತು, ಆದರೆ, ನಾವು ತಡೆಯಲಿಲ್ಲ. ಬಿಜೆಪಿ ಭ್ರಷ್ಟಾಚಾರದ ವಿರುದ್ಧವಾಗಿದೆ, ಅದಕ್ಕೆ ಲೋಕಾಯುಕ್ತ ಬಲ ಮಾಡಿದ್ದೇವೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು, ಯಾರನ್ನೂ ಉಳಿಸುವ ಕೆಲಸ ಮಾಡುವುದಿಲ್ಲ ಎಂದು ಜೋಶಿ ಹೇಳಿದರು.