Advertisement

ನಮ್ಮ ದೇಶದಲ್ಲಿರೋದು ಬಿಜೆಪಿ ಹವಾ

06:13 PM Mar 13, 2018 | Team Udayavani |

ಹೊಳಲ್ಕೆರೆ: ದೇಶದೆಲ್ಲೆಡೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಶ್ರಮಿಸುತ್ತಿದ್ದಾರೆ. ಅದೇ ರೀತಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಹೊಣೆಗಾರಿಕೆ ಕಾರ್ಯಕರ್ತರ ಮೇಲಿದೆ
ಎಂದು ಕೇಂದ್ರ ಸಚಿವ ಪಿ. ರಾಧಾಕೃಷ್ಣನ್‌ ಕರೆ ನೀಡಿದರು.

Advertisement

ಪಟ್ಟಣದ ವಾಲ್ಮೀಕಿ ಸಮುದಾಯ ಭವನದಲ್ಲಿ ತಾಲೂಕು ಬಿಜೆಪಿ ವತಿಯಿಂದ ಆಯೋಜಿಸಿದ್ದ ನವಶಕ್ತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಪಕ್ಷದ ನೆಲೆಗಟ್ಟು ಇಲ್ಲದ ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿರುವ ಜನಪರ ಕಾರ್ಯಕ್ರಮಗಳು, ಸ್ವದೇಶಿ ಚಿಂತನೆ, ವಿಶ್ವ ಮಟ್ಟದಲ್ಲಿ ಭಾರತದ ವಿದೇಶಾಂಗ ನೀತಿಗಳಿಗೆ ಸಿಕ್ಕ ಬೆಂಬಲ, ಜಿಎಸ್‌ಟಿ ಜಾರಿ ಸೇರಿದಂತೆ ಹಲವಾರು ಕಾರ್ಯಕ್ರಮಗಳು ಯಶಸ್ವಿಯಾಗಿವೆ. ಹಾಗಾಗಿ ದೇಶದಲ್ಲಿ ಬಿಜೆಪಿ ಹವಾ ಆರಂಭವಾಗಿದೆ. ಅದನ್ನು ಇಲ್ಲಿನ ಕಾರ್ಯಕರ್ತರು ಸದ್ಭಳಕೆ ಮಾಡಿಕೊಂಡು ಕರ್ನಾಟಕದಲ್ಲೂ ಪಕ್ಷವನ್ನು ಅಧಿ ಕಾರಕ್ಕೆ
ತರಬೇಕು ಎಂದರು. 

ಮಾಜಿ ಶಾಸಕ ಎಂ. ಚಂದ್ರಪ್ಪ ಮಾತನಾಡಿ, ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಚಿತ. ಕಾಂಗ್ರೆಸ್‌ ಸರ್ಕಾರದ ಜನ ವಿರೋಧಿ  ನೀತಿಗಳಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕೋಮುವಾದ ಹೆಚ್ಚಾಗಿದ್ದು, ಧರ್ಮಗಳನ್ನು ಒಡೆದು ಸಮಾಜದ ನಾಶಕ್ಕೆ ಸರ್ಕಾರ ಮುಂದಾಗಿದೆ. ಇದರಿಂದ ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ 
ಅವನತಿಯತ್ತ ಸಾಗುತ್ತಿದೆ. ಕಾಂಗ್ರೆಸ್‌ ಮುಕ್ತ ಕರ್ನಾಟಕ ಆಗುವ ಕಾಲ ಸನ್ನಿತವಾಗಿದೆ ಎಂದು ಹೇಳಿದರು. ಮಾಜಿ ಶಾಸಕ ಪಿ. ರಮೇಶ್‌, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್‌. ನವೀನ್‌, ಜಿ.ಎಂ. ಸುರೇಶ್‌, ಸಿದ್ದೇಶ್‌ ಯಾದವ್‌, ಪೂರ್ಣಿಮಾ ಶ್ರೀನಿವಾಸ್‌, ಮಹೇಶ್‌, ನರೇಂದ್ರನಾಥ್‌, ದಗ್ಗೆ ಶಿವಪ್ರಕಾಶ್‌ ಇತರರು ಇದ್ದರು.

ದಕ್ಷಿಣದ ಹೆಬ್ಟಾಗಿಲು ಕರ್ನಾಟಕದಲ್ಲೂ ಬಿಜೆಪಿ ಅಧಿಕಾರಕ್ಕೆ ಬರೋದು ಖಚಿತ: ಸಚಿವ ರಾಧಾಕೃಷ್ಣನ್‌ ವಿಶ್ವಾಸ 
ಹೊಸದುರ್ಗ: ಕೇಂದ್ರ ಸರಕಾರದ ಅಭಿವೃದ್ಧಿ ಕಾರ್ಯಗಳು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಸ್ವತ್ಛ ಆಡಳಿತವನ್ನು ಮೆಚ್ಚಿರುವ ಜನತೆ ಕರ್ನಾಟಕದಲ್ಲಿ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ಕೇಂದ್ರ ಸಚಿವ ಪಿ. ರಾಧಾಕೃಷ್ಣನ್‌ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ಹೇಮಾವತಿ ಸಮುದಾಯ ಭವನದಲ್ಲಿ ನಡೆದ ನವಶಕ್ತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, 2014ರ ಲೋಕಸಭಾ ಚುನಾವಣೆಗೂ ಮುನ್ನ ದೇಶದಲ್ಲಿ ಬಿಜೆಪಿ ಕೇವಲ 6 ರಾಜ್ಯಗಳಲ್ಲಿ ಅಧಿಕಾರದಲ್ಲಿತ್ತು. ಮೋದಿ ಪ್ರಧಾನಿಯಾದ ನಂತರ 21 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ದಕ್ಷಿಣ ಭಾರತದ ಹೆಬ್ಟಾಗಿಲು ಕರ್ನಾಟಕದಲ್ಲೂ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಕ್ಕೆ ಬರಲಿದ್ದೇವೆ ಎಂದರು. ಮಾಜಿ ಸಚಿವ ಗೂಳಿಹಟ್ಟಿ ಶೇಖರ್‌ ಮಾತನಾಡಿ, ರೈತ ಪರವಾದ
ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಯಡಿಯೂರಪ್ಪ ಅವರ ಕೈಯನ್ನು ಬಲಪಡಿಸಬೇಕಿದೆ. ನಾನು ಸಚಿವನಾಗಿದ್ದಾಗ ನನ್ನ
ವಿರೋಧಿಗಳಿಗೂ ತೊಂದರೆ ಕೊಟ್ಟಿಲ್ಲ. ಯಾರ ಬಳಿಯೂ ಕಮೀಷನ್‌ ಪಡೆದಿಲ್ಲ. ತಾಲೂಕಿನ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದು ತಿಳಿಸಿದರು. 

ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲಿಂಗಮೂರ್ತಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಅಭಿವೃದ್ಧಿ ಕಾರ್ಯ
ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ಮಾಡಿದ ಜನಪರ ಕೆಲಸಗಳನ್ನು ಕಳೆದ 4 ವರ್ಷಗಳಿಂದ ಜನತೆಗೆ ಮನವರಿಕೆ
ಮಾಡಲಾಗುತ್ತಿದೆ. ಚುನಾವಣೆಗೆ ಕೇವಲ ಎರಡು ತಿಂಗಳು ಮಾತ್ರ ಬಾಕಿ ಉಳಿದಿದೆ. ಬೂತ್‌ ಸಮಿತಿಯವರು ತಮ್ಮ ಗ್ರಾಮಗಳಲ್ಲಿ ಬಿಜೆಪಿಗೆ ಶೇ. 70ರಷ್ಟು ಮತದಾನವಾಗುವಂತೆ ನೋಡಿಕೊಳ್ಳಬೇಕು. ಬೂತ್‌ ಸಮಿತಿಯಲ್ಲಿ ಮಹಿಳೆಯರು ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಅವಕಾಶ ನೀಡಲಾಗಿದೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್‌. ನವೀನ್‌ ಮಾತನಾಡಿ, ಚುನಾವಣೆ ಸನ್ನಿಹಿತವಾಗಿದ್ದು, ಕಾರ್ಯಕರ್ತರು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು. ಎಲ್ಲರೂ ತಮಗೆ ವಹಿಸಿರುವ ಜವಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದಲ್ಲಿ ಪಕ್ಷ ಅಧಿಕಾರಕ್ಕೆ ಬರುವುದರಲ್ಲಿ ಸಂದೇಹವಿಲ್ಲ ಎಂದು ಹೇಳಿದರು.

Advertisement

ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಡಿ.ಟಿ. ವಟ್ಟಿ ಲಕ್ಷ್ಮಣ್‌, ಖಜಾಂಚಿ ರವಿಕುಮಾರ್‌, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್‌, ದೊಡ್ಡಯ್ಯ, ಪೂರ್ಣಿಮಾ ಶ್ರೀನಿವಾಸ್‌, ಚುನಾವಣಾ ಪ್ರಮುಖ್‌ ಗಣೇಶ್‌ ರಾಚ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್‌, ಮುಖಂಡರಾದ ಕೊಂಡಾಪುರ ಮಂಜುನಾಥ್‌, ಗೂಳಿಹಟ್ಟಿ ಕೃಷ್ಣಮೂರ್ತಿ, ತಾಪಂ ಸದಸ್ಯ ಮಲ್ಲಿಕಾರ್ಜುನ್‌, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ನರೇಂದ್ರನಾಥ್‌ ಮತ್ತಿತರರು ಇದ್ದರು.

ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್‌ ಪಕ್ಷದ ವೈಫಲ್ಯವನ್ನು ಜನರಿಗೆ ತಿಳಿಸುವ ಕೆಲಸವನ್ನು ಕಾರ್ಯಕರ್ತರು ಮತ್ತು ಮುಖಂಡರು
ಮಾಡಬೇಕು. ಹೊಳಲ್ಕೆರೆ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲವಾಗಿ ಬೆಳೆದು ನಿಂತಿದ್ದು, ಪ್ರತಿಸ್ಪರ್ಧಿಗಿಂತ ಸುಮಾರು 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎನ್ನುವ ಮಾಹಿತಿ ಸಿಕ್ಕಿದೆ. ಹಾಗಾಗಿ ಕಾರ್ಯಕರ್ತರು ಮತ್ತಷ್ಟು ಪರಿಣಾಮಕಾರಿಯಾಗಿ ಪಕ್ಷ ಸಂಘಟನೆಗೆ ಒತ್ತು ನೀಡಬೇಕು.

ಪಿ. ರಾಧಾಕೃಷ್ಣನ್‌, ಕೇಂದ್ರ ಸಚಿವರು.

Advertisement

Udayavani is now on Telegram. Click here to join our channel and stay updated with the latest news.

Next