Advertisement

ದೇಗುಲಗಳ ಧ್ವಂಸ ಮತ್ತು ಪ್ರತಿಭಟನೆ ಹಿಂದೆ ಬಿಜೆಪಿಯಿದೆ: ಕುಮಾರಸ್ವಾಮಿ ಅನುಮಾನ

04:18 PM Sep 14, 2021 | Team Udayavani |

ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದ ನೆಪದಲ್ಲಿ ಮೈಸೂರು ಜಿಲ್ಲೆಯ 93 ದೇವಾಲಯಗಳ ಧ್ವಂಸಕ್ಕೆ ರಾಜ್ಯ ಬಿಜೆಪಿ ಸರ್ಕಾರದ ದ್ವಂದ್ವ ನೀತಿಯೇ ಕಾರಣ. ಒಂದು ಸರ್ಕಾರಕ್ಕಿಂತ ಜಿಲ್ಲಾಡಳಿತ ದೊಡ್ಡದೇ? ಒಂದೆಡೆ ದೇಗುಲಗಳ ಧ್ವಂಸ ನಡೆಯುತ್ತಿದೆ. ಇನ್ನೊಂದೆಡೆ ಆಡಳಿತ ಪಕ್ಷದ ಮಿತ್ರಸಂಘಟನೆ ಹಿಂದೂ ಜಾಗರಣ ವೇದಿಕೆ ಹಾದಿಬೀದಿಯಲ್ಲಿ ಪ್ರತಿಭಟನೆ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದೇಗುಲಗಳ ಧ್ವಂಸ ಮತ್ತು ಪ್ರತಿಭಟನೆ ಹಿಂದೆ ಬಿಜೆಪಿ ಇದೆ ಎಂಬ ಅನುಮಾನ ಕಾಡುತ್ತಿದೆ. ಸರಕಾರ ಮನಸ್ಸು ಮಾಡಿದರೆ ತಕ್ಷಣವೇ ದೇಗುಲಗಳ ನೆಲಸಮ ನಿಲ್ಲಿಸಬಹುದು. ಸರಕಾರ ಅದನ್ನು ಮಾಡುತ್ತಿಲ್ಲ ಎಂದಿದ್ದಾರೆ.

ಹಿಂದುಗಳ ರಕ್ಷಣೆಯ ಪೇಟೆಂಟ್ ಪಡೆದು ರಾಜಕಾರಣ ಮಾಡುವ ಭಾರತೀಯ ಜನತಾ ಪಕ್ಷದ ಸರಕಾರವೇ ರಾಜ್ಯದಲ್ಲಿದೆ. ಹಾಗಾದರೆ, ದೇವಾಲಯಗಳನ್ನೇಕೆ ನೆಲಸಮ ಮಾಡಲಾಗುತ್ತಿದೆ? ಸರಕಾರವೇ ಇದಕ್ಕೆ ಉತ್ತರ ನೀಡಬೇಕು.ಸರಕಾರಕ್ಕೆ ನಿಜಕ್ಕೂ ದೇಗುಲ ಬಗ್ಗೆ ಕಾಳಜಿ ಇದ್ದರೆ ಕೂಡಲೇ ಸುಪ್ರೀಂ ಕೊರ್ಟ್ʼಗೆ ಮೇಲ್ಮನವಿ ಸಲ್ಲಿಸಲಿ. ಎಲ್ಲ ಪಕ್ಷಗಳನ್ನು ಕರೆದು ಚರ್ಚೆ ನಡೆಸಲಿ ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಸೇತುವೆ ಮೇಲೆ ಹಳಿ ತಪ್ಪಿದ ಸರಕು ಸಾಗಣೆ ರೈಲು, ನದಿಗೆ ಬಿದ್ದ ಒಂಬತ್ತು ಬೋಗಿ…

ಮಗುವನ್ನೂ ಚಿವುಟಿ, ತೊಟ್ಟಿಲನ್ನೂ ತೂಗುವ ಕೆಲಸ ಮಾಡುವುದು ಬೇಡ. ದೇವಾಲಯಗಳಿಗೆ ರಕ್ಷಣೆ ನೀಡಲು ಸರಕಾರ ಸಂಪೂರ್ಣ ವಿಫಲವಾಗಿದೆ. ಜವಾಬ್ದಾರಿಗಳಿಂದ ನುಣುಚಿಕೊಳ್ಳುತ್ತಿದೆ. ಜನರ ಗಮನ ಬೇರೆಡೆಗೆ ಸೆಳೆಯಲು ಸರಕಾರವೇ ಈ ನಾಟಕ ಆಡುತ್ತಿದೆಯಾ ಎಂಬ ಸಂಶಯ ಉಂಟಾಗುತ್ತಿದೆ. ಇದೂ ಬಿಜೆಪಿಯ ಕಾರ್ಯಸೂಚಿಯೇ ಎಂದು ಎಚ್ ಡಿಕೆ ಗುಡುಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next