Advertisement

ಚುನಾವಣೆಯಲ್ಲಿ150ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿಗೆ ಗೆಲುವು: ನಳಿನ್‌ ವಿಶ್ವಾಸ

09:51 PM Jan 20, 2023 | Team Udayavani |

ಬೆಂಗಳೂರು: ಮೀಸಲಾತಿ ಹೆಚ್ಚಳದ ಬಳಿಕ ಜನರು ಬಿಜೆಪಿಯತ್ತ ಹರಿದುಬರುತ್ತಿದ್ದಾರೆ . ಮುಂದಿನ ಚುನಾವಣೆಯಲ್ಲಿ ಪಕ್ಷವು 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ವಿಶ್ವಾಸ ವ್ಯಕ್ತಪಡಿಸಿದರು.

Advertisement

ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್‌ – ಯುಪಿಎ ಸರಕಾರಗಳು ರೈತರನ್ನು ಮತಬ್ಯಾಂಕಿಗೆ ಮತ್ತು ಘೋಷಣೆಗೆ ಸೀಮಿತಗೊಳಿಸಿದ್ದವು. ಬಿಜೆಪಿ ಸರಕಾರಗಳು ರೈತಪರ ನಿಲುವನ್ನು ತಳೆದು ರೈತರ ಏಳಿಗೆಗೆ ಶ್ರಮಿಸಿವೆ. ಪ್ರಧಾನಿಯವರ ಕಲಬುರಗಿ, ಹುಬ್ಬಳ್ಳಿ ಕಾರ್ಯಕ್ರಮಗಳಿಗೆ ನಿರೀಕ್ಷೆಗೂ ಮೀರಿ ಜನಸಾಗರ ಬಂದಿದೆ. ವಿವಿಧ ಸಮಾವೇಶಗಳಲ್ಲೂ ಗರಿಷ್ಠ ಜನರು ಸೇರುತ್ತಿದ್ದಾರೆ. ಸರ್ವ ಸ್ಪರ್ಶಿ, ಸರ್ವವ್ಯಾಪಿಯಾಗಿ ಜನರು ಬಿಜೆಪಿ ಪರ ಒಲವು ತೋರುತ್ತಿದ್ದಾರೆ ಎಂದು ತಿಳಿಸಿದರು.

ಅಪ್ಪ-ಮಕ್ಕಳ ಪಕ್ಷದಲ್ಲಿ ಕಿತ್ತಾಟ
ಅಪ್ಪ ಮಕ್ಕಳ ಪಕ್ಷದಲ್ಲಿ ಅಣ್ಣ ದೊಡ್ಡವನೋ, ತಮ್ಮ ದೊಡ್ಡವನೋ ಎಂಬ ಕಿತ್ತಾಟ ಆರಂಭವಾಗಿದೆ. ಇನ್ನೊಂದು ರಾಷ್ಟ್ರೀಯ ಪಕ್ಷದಲ್ಲಿ ಮುಖ್ಯಮಂತ್ರಿ ಯಾರೆಂಬ ಕಿತ್ತಾಟ ಆರಂಭವಾಗಿದೆ. ಅವರ ಪಾರ್ಟಿಯ ಮೀಟಿಂಗ್‌ ಆದಾಗ ಒಬ್ಬನ ಚಪ್ಪಲಿ ಇನ್ನೊಬ್ಬನ ದೇಹದ ಮೇಲಿರುತ್ತದೆ. ಬಿಜೆಪಿಯಲ್ಲಿ ಮಾತ್ರ ಶಾಂತವಾಗಿ ಸಭೆ ನಡೆಯುತ್ತದೆ ಎಂದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌ .ರವಿಕುಮಾರ್‌, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಭಾಗವಹಿಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next