Advertisement

Hubli; ಬಿಜೆಪಿ ರಾಜಕಾರಣ ಮಾಡಿ ತಮ್ಮಲ್ಲಿಯೇ ಒಡಕು ಮಾಡಿಕೊಳ್ಳುತ್ತಿದೆ: ಸಂತೋಷ್‌ ಲಾಡ್

03:09 PM Dec 07, 2024 | Team Udayavani |

ಹುಬ್ಬಳ್ಳಿ: ಬಿಜೆಪಿಯವರಿಗೆ ಅಭಿವೃದ್ಧಿ ಬೇಕಿಲ್ಲ, ಬದಲಾಗಿ ರಾಜಕೀಯ ಮಾತನಾಡುತ್ತಾ, ರಾಜಕಾರಣ ಲಾಭ ಪಡೆಯುವುದು ಬಿಜೆಪಿಯವರ ಸಿದ್ದಾಂತವಾಗಿದೆ ಎಂದು ಸಚಿವ ಸಂತೋಷ ಲಾಡ್ ಆರೋಪಿಸಿದರು.

Advertisement

ಶನಿವಾರ (ಡಿ.07) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಸರ್ಕಾರಗಳು ವಕ್ಫ್‌ ವಿಚಾರವಾಗಿ ನೋಟಿಸ್ ಕೊಟ್ಟಿವೆ. ಆದರೆ ಬಿಜೆಪಿ ಇದನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದೆ. ಈ ಹಿಂದೆ ಉಳುವವನೇ ಒಡೆಯ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು ಕಾಂಗ್ರೆಸ್. ಬಡವರಿಗೆ ಭೂಮಿ ಒದಗಿಸುವ ಕಾರ್ಯವನ್ನು ಕಾಂಗ್ರೆಸ್ ಮಾಡಿದೆ ಎಂದರು.

ಈಗಾಗಲೇ ವಕ್ಫ್ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಯಾವೊಬ್ಬ ರೈತನಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದಿದ್ದಾರೆ. ಆದರೆ ಸುಖಾಸುಮ್ಮನೆ ಬಿಜೆಪಿ ರಾಜಕಾರಣ ಮಾಡಿ, ತಮ್ಮಲ್ಲಿಯೇ ಒಡಕು ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದರು.

ಬಸನಗೌಡ ಪಾಟೀಲ್ ಯತ್ನಾಳ ನೆಗೆಟಿವ್ ಮಾತನಾಡಿದರೆ ಪ್ರಚಾರ ಪಡೆಯಬಹುದೆಂಬ ಉದ್ದೇಶದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಈ ಹಿಂದೆ ಪಾಕಿಸ್ತಾನಕ್ಕೆ ದೇಶದ ಪ್ರಧಾನಿ ಆಮಂತ್ರಣವಿಲ್ಲದಿದ್ದರೂ ಕೇಕ್ ತಿನ್ನಲು ಹೋಗಿದ್ದರೇ? ಅದರ ಬಗ್ಗೆ ಮೊದಲು ಬಿಜೆಪಿಯವರು ಮಾತನಾಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್’ನಲ್ಲಿ ಸಿಎಂ, ಡಿಸಿಎಂ ಬಣ ರಾಜಕೀಯ ವಿಚಾರವಾಗಿ ಮಾತನಾಡಿ, ಯಾರು ವೈಯಕ್ತಿಕ ಹೇಳಿಕೆಯನ್ನು ಕೊಟ್ಟಿದ್ದಾರೆ ಕೊಟ್ಟಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಈಗಾಗಲೇ ಈ ಬಗ್ಗೆ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ವಿಚಾರ ಅಪ್ರಸ್ತುತ. ಸಿಎಂ ಬದಲಾವಣೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.

Advertisement

ನಕಲಿ ಕಾರ್ಮಿಕ ರದ್ದು ಮಾಡಲು ಹೋಗಿ ಅಸಲಿ ಕಾರ್ಮಿಕರ ಕಾರ್ಡ್ ರದ್ದಾಗಿರುವ ಕುರಿತು ಪ್ರತಿಕ್ರಿಯೆ ನೀಡಿ, ಆ ತರಹ ರಾಜ್ಯದಲ್ಲಿ ಯಾವುದೇ ಘಟನೆಗಳು ನಡೆದಿಲ್ಲ. ಹಾಗೇನಾದರೂ ನಡೆದಿದ್ದೆ ಆದಲ್ಲಿ ಕಾರ್ಮಿಕ ಕಾರ್ಡ್ ಗಳನ್ನು ಮಾಡಿಸಿಕೊಡುವ ಪ್ರಾಮಾಣಿಕ ಕೆಲಸ ಮಾಡಲಾಗುವುದು ಎಂದರು.

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿ, ನಮಗೆ ಈ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಸರ್ಕಾರ ನಿರ್ಮಾಣ ಮಾಡಿದೆ. ವಿಪಕ್ಷಗಳು ರಾಜಕೀಯ ಮಾಡದೆಡ ಇದಕ್ಕೆ ಸಹಕಾರ ನೀಡಬೇಕು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next