Advertisement

ಬಿಜೆಪಿ ದೇಶದ ಜನತೆಯ ದಾರಿ ತಪ್ಪಿಸುತ್ತಿದೆ, ಭರವಸೆ ಈಡೇರಿಸಿಲ್ಲ : ದಿನೇಶ್ ಗುಂಡೂರಾವ್

02:05 PM Jun 03, 2022 | Team Udayavani |

ಪಣಜಿ: ಕಳೆದ 8 ವರ್ಷಗಳಲ್ಲಿ ಕೇಂದ್ರದ ಬಿಜೆಪಿ ಸರ್ಕಾರವು ದೇಶದ ಜನತೆಯನ್ನು ದಾರಿ ತಪ್ಪಿಸುತ್ತಿರುವ ಕುರಿತಂತೆ ಚರ್ಚೆ ನಡೆಸಿ ಇದನ್ನು ದೇಶದ ಜನತೆಗೆ ತಲುಪಿಸುವ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Advertisement

ಉದಯಪುರದಲ್ಲಿ ಕಾಂಗ್ರೆಸ್  ರಾಷ್ಟ್ರೀಯ ಕಾರ್ಯಕಾರಿಣಿಯ ಧ್ಯಾನ ಶಿಬಿರದ ನಂತರ ಗೋವಾದಲ್ಲಿ ಕಾಂಗ್ರೆಸ್ ಪಕ್ಷದ ಎರಡು ದಿನಗಳ ನವಸಂಕಲ್ಪ ಶಿಬಿರ ಆರಂಭಗೊಂಡಿದ್ದು, ಪಣಜಿಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಕರೆದಿದ್ದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಎಂಟು ವರ್ಷಗಳಲ್ಲಿ ಜನತೆಗೆ ನೀಡಿದ ಭರವಸೆ ಈಡೇರಿಸಲು ಸರ್ಕರದಿಂದ ಸಾಧ್ಯವಾಗಿಲ್ಲ. ಕೇಂದ್ರ ಸರ್ಕಾರವು ನಾನಾ ಯೋಜನೆಗಳ ಆಮಿಷವೊಡ್ಡಿ ಜನರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸಲಾಗುತ್ತಿದೆ. ಹೀಗಾಗಿ ಬಿಜೆಪಿ ಸರ್ಕಾರದ ಈ ಎಲ್ಲ ಕೃತ್ಯವನ್ನು ಜನತೆಯ ಮುದಿಡಲಾಗುವುದು ಎಂದು ಹೇಳಿದರು.

ಇನ್ನು ಕೆಲವೇ ದಿನಗಳಲ್ಲಿ ಬಿಜೆಪಿ ಶಾಸಕರ ಸಂಖ್ಯೆ 30 ಕ್ಕೆ ಏರಿಕೆಯಾಗಲಿದೆ ಎಂದು ಬಿಜೆಪಿ ಗೋವಾ ಉಸ್ತುವಾರಿ ಸಿ.ಟಿ ರವಿ ನೀಡಿರುವ ಹೇಳಿಕೆಗೆ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿ, ಇದರಲ್ಲಿ ಯಾವುದೇ ಸತ್ಯವಿಲ್ಲ. ಇಂತಹ ಹೇಳಿಕೆಗಳು ರಾಜಕೀಯದಲ್ಲಿ ಬರುತ್ತಿರುತ್ತದೆ. ಕಾಂಗ್ರೆಸ್ ಶಾಸಕರ ಮೇಲೆ ನನಗೆ ವಿಶ್ವಾಸವಿದೆ, ನಮ್ಮ ಶಾಸಕರು ನಮ್ಮ ಪಕ್ಷ ಬಿಟ್ಟು ಹೋಗುವುದಿಲ್ಲ. ಅವರ ಹೇಳಿಕೆಯನ್ನು ಪಕ್ಷವು ಗಂಭೀರವಾಗಿ ಪರಿಗಣಿಸುವುದಿಲ್ಲ. ಇಂದಿನ ನವಸಂಕಲ್ಪ ಶಿಭಿರದಲ್ಲಿ ಒಂದೆರಡು ಶಾಸಕರನ್ನು ಹೊರತುಪಡಿಸಿ ಉಳಿದೆಲ್ಲ ಶಾಸಕರೂ ಭಾಗಿಯಾಗಿದ್ದಾರೆ, ಪಕ್ಷಕ್ಕೆ ಬದ್ಧತೆ ತೋರಿಸಿದ್ದಾರೆ ಎಂದರು.

ಗೋವಾದಲ್ಲಿ ನಿಗದಿತ ಸಮಯಕ್ಕೆ ಪಂಚಾಯತಿ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಇಷ್ಟವಿಲ್ಲ. ಇದರಿಂದಾಗಿ ಒಬಿಸಿ ಸರ್ವೆ ಕಾರಣವನ್ನು ಮುಂದಿಟ್ಟುಕೊಂಡು ಈ ಚುನಾವಣೆಯನ್ನು ಮುಂದೂಡಲು ಪ್ರಯತ್ನಿಸಲಾಗುತ್ತಿದೆ. ರಾಜ್ಯ ಚುನಾವಣಾ ಆಯೋಗ ಆದಷ್ಟು ಬೇಗ ಗೋವಾದಲ್ಲಿ ಪಂಚಾಯತ್ ಚುನಾವಣೆ ನಡೆಸಲು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ. ಪ್ರಸಕ್ತ ಗೋವಾ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ವಿರುದ್ಧದ ಹಲವು ಪ್ರಸ್ತಾಪಗಳಿವೆ, ಇದನ್ನು ಚರ್ಚೆಗೆ ತರಲು ಸಿದ್ಧತೆ ನಡೆಸಲಾಗುತ್ತಿದೆ. ಪ್ರತಿಪಕ್ಷದ ಧ್ವನಿಯನ್ನು ಹತ್ತಿಕ್ಕಲು ಬಿಜೆಪಿಯು “ಇಡಿ”ಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next